ಕೆ ರಾಮ್ ನಾರಾಯಣ್ ನಿರ್ದೇಶನದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರ ಮೇ 23ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಚಿತ್ರದಲ್ಲಿ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಹಾಗೂ ‘ರಾಮಾಚಾರಿ’ ಧಾರಾವಾಹಿ ನಟಿ ಮೌನಾ ಗುಡ್ಡೇಮನೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್ ಕಥೆ ಬರೆದಿದ್ದಾರೆ.
ಇತ್ತೀಚೆಗಷ್ಟೇ ಚಿತ್ರದ ಶೀರ್ಷಿಕೆ ಗೀತೆಯನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಚಿತ್ರಕ್ಕೆ ಮನೋಮೂರ್ತಿ ಅವರು ಸಂಗೀತ ಸಂಯೋಜಿಸಿದ್ದಾರೆ. ಚೇತನ್ ಸೋಸ್ಕಾ ಹಾಡಿರುವ ಹಾಡಿನಲ್ಲಿ ಯೋಗರಾಜ್ ಭಟ್ ಅಭಿನಯಿಸಿದ್ದಾರೆ.
ಈಗಾಗಲೇ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ..’ ಹಾಡು ಇತ್ತೀಚೆಗೆ ಬಿಡುಗಡೆ ಆಗಿ ಪ್ರೇಕ್ಷಕರ ಗಮನ ಸೆಳೆದಿದೆ. ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ಆಂಥೋನಿ ದಾಸ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ.
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಶರತ್ ಲೋಹಿತಾಶ್ವ, ತಬಲ ನಾಣಿ, ಸೋನಲ್ ಮೊಂತೇರೋ, ಕರಿಸುಬ್ಬು, ಡ್ರ್ಯಾಗನ್ ಮಂಜು ಮತ್ತು ಸೀನಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಬ್ಯಾನರ್ನಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ.

Be the first to comment