ರಿಷಬ್ ಶೆಟ್ಟಿಯ “ಕಾಂತಾರ ಭಾಗ 1” ಚಿತ್ರವನ್ನು ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗುತ್ತಿದೆ.
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಮುಂಬೈನಲ್ಲಿ ಆಯೋಜಿಸಿದ್ದ ಪ್ರತಿಷ್ಠಿತ ವಿಶ್ವ ಆಡಿಯೋ ವಿಷುಯಲ್ ಮತ್ತು ಎಂಟರ್‌ಟೈನ್‌ಮೆಂಟ್ ಶೃಂಗಸಭೆ (WAVES Summit 2025) ಯಲ್ಲಿ ಉಪಸ್ಥಿತರಿದ್ದ ಹೊಂಬಾಳೆ ಫಿಲ್ಮ್ಸ್‌ನ ಸಹ ಸಂಸ್ಥಾಪಕರಾದ ಚಲುವೇ ಗೌಡ ಅವರು ಕಾಂತಾರ ಭಾಗ 1 ಚಿತ್ರವನ್ನು ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಾಗಿ ಕಾರ್ಯತಂತ್ರ ರೂಪಿಸಿ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿ
“ಆಸ್ಕರ್ ಅರ್ಜಿ ಮತ್ತು ಪ್ರಚಾರ ಪ್ರಕ್ರಿಯೆಯ ಕುರಿತು ಸ್ಪಷ್ಟ ತಿಳುವಳಿಕೆಯ ಕೊರತೆಯಿದೆ. ಇಂತಹ ವಿಷಯಗಳ ಕುರಿತು ಕಾರ್ಯಾಗಾರಗಳನ್ನು ಆಯೋಜಿಸಿದರೆ, ಹೆಚ್ಚಿನ ಭಾರತೀಯ ಸೃಷ್ಟಿಕರ್ತರಿಗೆ ಜಾಗತಿಕವಾಗಿ ತಮ್ಮ ಛಾಪು ಮೂಡಿಸಲು ಸಾಧ್ಯವಾಗುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.
RRR” ಚಿತ್ರದ ಸಂಕಲನಕಾರ ಎ. ಶ್ರೀಕರ್ ಪ್ರಸಾದ್ ಹಾಗೂ ಆಸ್ಕರ್ ಸಮಿತಿಯ ಸದಸ್ಯ ಮತ್ತು ಭಾರತೀಯ ಚಲನಚಿತ್ರ ಒಕ್ಕೂಟದ ತಾಂತ್ರಿಕ ಸಲಹೆಗಾರ ಉಜ್ವಲ್ ನಿರ್ಗುಡ್ಕರ್ ಚರ್ಚೆಯಲ್ಲಿ ಪಾಲ್ಗೊಂಡರು.
ವಿಶ್ವ ಆಡಿಯೋ ವಿಷುಯಲ್ ಮತ್ತು ಎಂಟರ್‌ಟೈನ್‌ಮೆಂಟ್ ಶೃಂಗಸಭೆ ಭಾರತದ ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರದ ಬೆಳವಣಿಗೆ, ನಾವೀನ್ಯತೆ ಮತ್ತು ಜಾಗತಿಕ ಸಾಮರ್ಥ್ಯವನ್ನು ಅನಾವರಣಗೊಳಿಸುವ ಗುರಿಯನ್ನು ಹೊಂದಿದೆ.
—-

Be the first to comment