ಬಹುಭಾಷಾ ನಟ ಸುಮನ್ ತಲ್ವಾರ್ ಅವರು “ಸ್ನೇಹದ ಕಡಲಲ್ಲಿ” ಎಂಬ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಾರೆ.
ಸ್ಟಾರ್ ಸುವರ್ಣದಲ್ಲಿ ಹೊಸ ಧಾರಾವಾಹಿ “ಸ್ನೇಹದ ಕಡಲಲ್ಲಿ” ಆರಂಭವಾಗಲಿದೆ. ಮೇ12 ರ ಸೋಮವಾರದಿಂದ ಪ್ರತಿದಿನ ರಾತ್ರಿ 8.30ಕ್ಕೆ ಈ ಧಾರಾವಾಹಿ ಪ್ರಸಾರವಾಗಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಪ್ರೀತಂ ಶೆಟ್ಟಿ, “ಸ್ನೇಹದ ಕಡಲಲ್ಲಿ” ಧಾರಾವಾಹಿಯಲ್ಲಿ ದಕ್ಷಿಣ ಭಾರತದ ಜನಪ್ರಿಯ ನಟ ಸುಮನ್ ತಲ್ವಾರ್ ಅವರು ಅಭಿನಯಿಸುತ್ತಿದ್ದಾರೆ. ಇದು ಸುಮನ್ ಅವರು ಅಭಿನಯಿಸುತ್ತಿರುವ ಮೊದಲ ಕನ್ನಡ ಧಾರಾವಾಹಿ. ಚಂದು ಗೌಡ ನಾಯಕನಾಗಿ ಕಾವ್ಯ ಮಹದೇವ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಪಿಂಗಾರ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿದೆ” ಎಂದರು.
‘ನಾನು ಚಿತ್ರರಂಗಕ್ಕೆ ಬಂದು 47 ವರ್ಷಗಳಾಯಿತು. ಕನ್ನಡ, ತಮಿಳು, ತೆಲುಗು ಸೇರಿದಂತೆ 11 ಭಾಷೆಗಳ ಚಿತ್ರಗಳಲ್ಲಿ ನಟಿಸಿದ್ದೇನೆ. ‘ ಪ್ರೀತಂ ಶೆಟ್ಟಿ ಅವರ ನಿರ್ದೇಶನದ ಚಿತ್ರದಲ್ಲೂ ನಟಿಸಿದ್ದೇನೆ. “ಸ್ನೇಹದ ಕಡಲಲ್ಲಿ” ನಾನು ನಟಿಸುತ್ತಿರುವ ಮೊದಲ ಕನ್ನಡ ಧಾರಾವಾಹಿ. ಕಥೆ ಇಷ್ಟವಾಯಿತು.ಸ್ಟಾರ್ ಸುವರ್ಣ ವಾಹಿನಿ ಅವರು ಆಯ್ಕೆ ಮಾಡುವ ಕಂಟೆಂಟ್ ಉತ್ತಮವಾಗಿರುತ್ತದೆ. ಹಾಗಾಗಿ ನಾನು ಈ ಧಾರಾವಾಹಿಯಲ್ಲಿ ಅಭಿನಯಿಸಲು ಒಪ್ಪಿಕೊಂಡೆ’ ಎಂದು ನಟ ಸುಮನ್ ತಲ್ವಾರ್ ತಿಳಿಸಿದರು.
‘ನನಗೆ ಸಿನಿಮಾದಲ್ಲಿ ಹಾಗೂ ಧಾರಾವಾಹಿಯಲ್ಲಿ ನಟಿಸುವುದು ಎರಡೂ ಒಂದೇ. “ಸ್ನೇಹದ ಕಡಲಲ್ಲಿ” ಧಾರವಾಹಿಯ ಕಥೆ ತುಂಬಾ ಚೆನ್ನಾಗಿದೆ. ಶಿವರಾಜ್ ಅರಸ್ ನನ್ನ ಪಾತ್ರದ ಹೆಸರು. ದಕ್ಷಿಣ ಭಾರತದ ಖ್ಯಾತ ನಟ ಸುಮನ್ ಅವರು ಈ ಧಾರಾವಾಹಿಯಲ್ಲಿ ನನ್ನ ತಂದೆ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತಸವಾಗಿದೆ’ ಎಂದು ನಟ ಚಂದು ಗೌಡ ತಿಳಿಸಿದರು.

Be the first to comment