‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆಯದೇ ಇರುವುದಕ್ಕೆ ರಿಷಬ್ ಶೆಟ್ಟಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ರಾಕೇಶ್ ಸಾಯುವ ದಿನ ಕಾಂತಾರ 1 ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ರಾಕೇಶ್ ನಿಧನದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದ ರಿಷಬ್ ಶೆಟ್ಟಿ ಸಹನಟನ ಸಾವಿಗೆ ಬಾರದೇ ಇರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.
30 ಕಿಲೋ ಮೀಟರ್ ದೂರದ ಬೈಂದೂರಿನಲ್ಲಿದ್ರೂ ರಿಷಬ್ ಶೆಟ್ಟಿ, ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದಿಲ್ಲ. ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಂತ್ವಾನ ಹೇಳಿಲ್ಲ. ಕಲಾವಿದನಿಗಿಂತ ಕಮರ್ಶಿಯಲ್ ಹೆಚ್ಚಾಯ್ತಾ? 500 ಕಿ.ಮೀ. ದೂರದಿಂದ ಬಂದವರ ನಡುವೆ 30 ಕಿ. ಮೀ. ದೂರದಲ್ಲಿದ್ದು ಬರಲು ಪುರಸೊತ್ತು ಇಲ್ಲವೇ? ಸಹ ಕಲಾವಿದನ ಜೀವಕ್ಕೆ ಇಷ್ಟೇನಾ ಬೆಲ?’ ಎಂಬಿತ್ಯಾದಿ ಪ್ರಶ್ನೆಗಳನ್ನು ನೆಟ್ಟಿಗರು ಕೇಳಿದ್ದಾರೆ.
ರಿಷಬ್ ಶೆಟ್ಟಿಯ ವರ್ತನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳು ಹರಿದಾಡುತ್ತಿವೆ. ಉಡುಪಿ ಬಳಿಯ ಬೈಂದೂರಿನಲ್ಲಿ ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ರಿಷಬ್ ಶೆಟ್ಟಿ ಬಾರದೇ ಇರುವುದು ಸಹಜವಾಗಿ ಆಕ್ರೋಶ ಮೂಡಿಸಿದೆ.
—-

Be the first to comment