ರಶ್ಮಿಕಾ-ವಿಜಯ್‌

ರಶ್ಮಿಕಾ-ವಿಜಯ್‌ ಜಾಲಿ ಜಾಲಿ!

ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ಜಾಲಿಯಾಗಿ ಒಂದೇ ಕಾರಿನಲ್ಲಿ ಒಟ್ಟಿಗೆ ಹೋಗಿರುವ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ಇಬ್ಬರೂ ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಒಂದೇ ಕಾರಿನಲ್ಲಿ ಮಾಸ್ಕ್‌ ಧರಿಸಿ ಮುಖ ಮುಚ್ಚಿಕೊಂಡಿರುವ ಈ ಜೋಡಿಯನ್ನು ಪಾಪಾರಾಜಿಗಳು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

ಸೀಕ್ರೆಟ್‌ ಆಗಿ ಬರ್ತಡೇ ಆಚರಿಸಿಕೊಳ್ಳುವ ಈ ಜೋಡಿ ಈಗ ಮುಂಬೈ ಮಯಾನಗರಯಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದಾರೆ. ವಿಜಯ್‌ ಜೊತೆ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಇಬ್ಬರೂ ವಿಮಾನ ನಿಲ್ದಾಣದಿಂದ ಹೊರ ಬಂದು ಕಾರಿನಲ್ಲಿ ಒಟ್ಟಾಗಿ ತೆರಳುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವೇಳೆ ಇಬ್ಬರೂ ಮುಖವನ್ನು ಮುಚ್ಚಿಕೊಂಡಿದ್ದರು.

ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಜೋಡಿ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಇದೆ. ಈ ಬಗ್ಗೆ ರಶ್ಮಿಕಾ ಮಂದಣ್ಣ ಹಾಗೂ ವಿಜಯ್‌ ದೇವರಕೊಂಡ ನಾವು ಜಸ್ಟ್‌ ಫ್ರೆಂಡ್ಸ್‌ ಎನ್ನುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಸದ್ಯ ‘ಕುಬೇರ’ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಜೂನ್ 20ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ.

—–

 

Be the first to comment

Leave a Reply

Your email address will not be published. Required fields are marked *

Translate »
error: Content is protected !!