ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು, ನಟ ಶಿವರಾಜ್ ಕುಮಾರ್ ಮನೆ ಗೇಟ್ ಮುಂದೆ ಕಾದರೂ ಶಿವಣ್ಣ ಮನೆಯ ಗೇಟ್ ಓಪನ್ ಆಗದೆ ಬರಿಗೈಲಿ ಮನೆಗೆ ವಾಪಸ್ ಆಗಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರ ಬಂದಿರುವ ಮಡೆನೂರು ಮನು, ಈ ಹಿಂದೆ ವೈರಲ್ ಆಗಿದ್ದ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಶಿವಣ್ಣ ಕಾಣಲು ಅವರ ಮನೆಗೆ ಹೋಗಿದ್ದಾರೆ ಎನ್ನಲಾಗಿದೆ. ನಾಗವಾರದಲ್ಲಿರುವ ಶಿವಣ್ಣನ ನಿವಾಸ ‘ಶ್ರೀಮುತ್ತು’ ಮುಂದೆ ತನ್ನ ಮಗು, ಪತ್ನಿ ಜೊತೆ ಮನು ಕಾದಿದ್ದಾರೆ. ಮಡೆನೂರು ಮನು ಎಷ್ಟೇ ಕಾದರು ಶಿವಣ್ಣನ ಮನೆಯ ಗೇಟ್ ಓಪನ್ ಆಗಲಿಲ್ಲ. ಮನು ಮತ್ತು ಅವರ ಕುಟುಂಬ ಕಾದು ಸುಸ್ತಾಗಿ ಮನೆಗೆ ವಾಪಸ್ ಆಗಿದ್ದಾರೆಎಂದು ಹೇಳಲಾಗಿದೆ. ಮನು ಶಿವಣ್ಣನಿಗಾಗಿ ಕಾಯುತ್ತಿರುವ ವಿಡಿಯೋ ವೈರಲ್ ಆಗಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್ವುಡ್ ನಟರ ಸಾವಿನ ಬಗ್ಗೆ ಮಡೆನೂರು ಮನು ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪ ಮಾಡಲಾಗಿತ್ತು. ಈ ಆಡಿಯೋ ವೈರಲ್ ಆದ ಬೆನ್ನಲ್ಲೇ ಮನು ವಿರುದ್ಧ ಶಿವಣ್ಣ ಅಭಿಮಾನಿಗಳು ಕೂಡ ಕೆರಳಿದ್ದರು. ಮನು ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಆಗ್ರಹಿಸಿದ್ದರು. ಫಿಲಂ ಚೇಂಬರ್ ಈ ಆರೋಪ ಸುಳ್ಳು ಎಂದು ಸಾಬೀತಾಗುವವರೆಗೆ ಮನು ಮೇಲೆ ನಿಷೇಧ ಹೇರುವುದಾಗಿ ತಿಳಿಸಿತ್ತು.
‘ಆ ಆಡಿಯೋ ನನ್ನದಲ್ಲ. ನನ್ನ ಸಿನಿಮಾ ಬರುವ ಹೊತ್ತಲ್ಲೇ ಆಡಿಯೋ ಹರಿಬಿಟ್ಟು ನನ್ನ ಮೇಲೆ ಷಡ್ಯಂತ್ರ ಮಾಡಿದ್ದಾರೆ. ಶಿವಣ್ಣನ ದೊಡ್ಡವರು. ನಾನು ಅವರ ಬಗ್ಗೆ ಆ ರೀತಿ ಮಾತನಾಡಿಲ್ಲ. ಈ ಬಗ್ಗೆ ನಾನೇ ಖುದ್ದಾಗಿ ಶಿವಣ್ಣ ಅವರನ್ನು ಭೇಟಿಯಾಗಿ ಕ್ಷಮೆ ಕೇಳುತ್ತೇನೆ’ ಎಂದು ಮನು ಹೇಳಿದ್ದರು.
—-





Be the first to comment