‘ಫಸ್ಟ್ ನೈಟ್ ವಿತ್ ದೆವ್ವ’ ರೊಮ್ಯಾಂಟಿಕ್ ಹಾಡು ಬಿಡುಗಡೆ

ಪ್ರಥಮ್ ನಾಯಕನಾಗಿ ಅಭಿನಯಿಸಿರುವ ‘ಫಸ್ಟ್ ನೈಟ್ ವಿತ್ ದೆವ್ವ’ ಚಿತ್ರದ ‘ತುಂಟ ಮನದ ಮಾಯೆ ನೀನು’ ರೊಮ್ಯಾಂಟಿಕ್ ಹಾಡು A2 music ಮೂಲಕ ಬಿಡುಗಡೆಯಾಯಿತು.

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ಹಾಗೂ ಸುನೀಲ್ ಸುಧೀಂದ್ರ, ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ  ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಫಸ್ಟ್ ನೈಟ್ ವಿತ್ ದೆವ್ವ

‘ಅದ್ವಿಕ್ ವರ್ಮ ಅವರ ಸಂಗೀತ ನಿರ್ದೇಶನದಲ್ಲಿ ರಿಚ್ಚಿ ತುಂಬಾ ಸೊಗಸಾಗಿ ಈ ಹಾಡನ್ನು ಹಾಡಿದ್ದಾರೆ. ಚಿತ್ರ ಕೆಲವೇ ದಿನಗಳಲ್ಲಿ ತೆರೆಗೆ ಬರಲಿದೆ. ಇತ್ತೀಚೆಗೆ  ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ನಾನೇ ಈ ಚಿತ್ರಕ್ಕೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದೇನೆ. ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ ಎಂದರು ನಾಯಕ ಪ್ರಥಮ್.

‘ನಾನು ಛಾಯಾಗ್ರಾಹಕನಾಗಿ ಬಹಳ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. ಈ ಚಿತ್ರಕ್ಕೂ ನಾನೇ ಛಾಯಾಗ್ರಹಣದ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. ‘ಫಸ್ಟ್ ನೈಟ್ ವಿತ್ ದೆವ್ವ’ ನನ್ನ ನಿರ್ದೇಶನದ ಐದನೇ ಚಿತ್ರ ಹಾಗೂ  ಐವತ್ತೆರಡನೇ ಛಾಯಾಗ್ರಹಣದ ಚಿತ್ರ. ಎಲ್ಲರೂ ಈ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಪಿ.ವಿ.ಆರ್ ಸ್ವಾಮಿ ಕೋರಿದರು.

ಫಸ್ಟ್ ನೈಟ್ ವಿತ್ ದೆವ್ವ

ಸಂಗೀತ ನಿರ್ದೇಶಕ ಅದ್ವಿಕ್ ವರ್ಮ, ಗಾಯಕ ರಿಚ್ಚಿ, ನೃತ್ಯ ನಿರ್ದೇಶಕ ಸೈ ರಮೇಶ್, ವಿ.ಎಫ್.ಎಕ್ಸ್ ದಯಾನಂದ್, ಸಂಕಲನ ಮಾಡುವುದರೊಂದಿಗೆ ಸಂಭಾಷಣೆಯನ್ನು ಬರೆದಿರುವ ನಾಗೇಶ್  ಚಿತ್ರದ ಕುರಿತು ಮಾತನಾಡಿದರು.

ನಿಖಿತಾಸ್ವಾಮಿ, ಸುಶ್ಮಿತಾ, ಹರೀಶ್ ರಾಜ್, ಶ್ರೀನಿವಾಸಮೂರ್ತಿ, ರಮೇಶ್ ಭಟ್, ತುಕಾಲಿ ಸಂತೋಷ್ ಮುಂತಾದವರು “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!