ಕನ್ನಡದ ನಟಿ ಹಾಗೂ ರಾಜಕಾರಣಿ ಭಾವನಾ ರಾಮಣ್ಣ ಅವಳಿ -ಜವಳಿ ಮಕ್ಕಳಿಗೆ ತಾಯಿಯಾಗುವ ಸಂಭ್ರಮದಲ್ಲಿದ್ದಾರೆ.
ಆರು ತಿಂಗಳ ಗರ್ಭಿಣಿಯಾಗಿರುವ 40 ವರ್ಷ ದಾಟಿರುವ ಭಾವನಾ ತಾವು ಐವಿಎಫ್ ಚಿಕಿತ್ಸೆ ಮೂಲಕ ಮಗು ಪಡೆಯಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ.
‘ನಾನು ಮದುವೆ ಮಾಡಿಕೊಂಡಿಲ್ಲ. ನನಗೆ ಮಕ್ಕಳೆಂದರೆ ತುಂಬ ಇಷ್ಟ. ತಾಯಿಯಾಗುವ ಹಂಬಲ ನನ್ನಲ್ಲಿ ತುಂಬಾ ವರ್ಷಗಳಿಂದ ಇತ್ತು. ನಾನು 20ನೇ ವಯಸ್ಸಿನಲ್ಲಿ ಮಗು ಮಾಡಿಕೊಳ್ಳುವ ಬಗ್ಗೆ ಯೋಚಿಸಿರಲಿಲ್ಲ. ನನಗೆ 30 ವಯಸ್ಸು ಆದಾಗ ಲವ್ಮಾಡಲು ರೆಡಿ ಇದ್ದೆ. 40 ಇದ್ದಾಗ ಮಗು ಮಾಡಿಕೊಳ್ಳೋದನ್ನು ಇಗ್ನೋರ್ ಮಾಡಲು ಆಗೋದಿಲ್ಲ. ಈ ವರ್ಷಾಂತ್ಯದಲ್ಲಿ ನಾನು ಅವಳಿ ಮಕ್ಕಳನ್ನು ಹೆರುವ ಖುಷಿಯಲ್ಲಿದ್ದೇನೆ ಎಂದಿದ್ದಾರೆ.
‘ಮಹಿಳೆಯರ ಸಿಂಗಲ್ ಪೇರೆಂಟ್ ನ್ನು ಕಾನೂನು ಬೆಂಬಲಿಸಿರಲಿಲ್ಲ. ಕಾನೂನು ಕೆಲಸ ಆದ ಬಳಿಕ ನಾನು ಈ ನಿರ್ಧಾರಕ್ಕೆ ಬಂದೆ. ಐವಿಎಫ್ ಕ್ಲಿನಿಕ್ ಹೋಗಿ ಚಿಕಿತ್ಸೆ ಪಡೆದೆ. ಮೊದಲ ಪ್ರಯತ್ನದಲ್ಲೇ ನಾನು ತಾಯಿಯಾಗಿರೋದು ಖುಷಿ ಕೊಟ್ಟಿದೆ’ ಎಂದು ಹೇಳಿದ್ದಾರೆ.
‘ನಾನು ತಾಯಿ ಆಗ್ತಿದೀನಿ ಅಂತ ಗೊತ್ತಾದಾಗ ನನ್ನ ತಂದೆ ತುಂಬ ಖುಷಿಪಟ್ಟರು. ನೀನು ಮಹಿಳೆ. ನಿನಗೆ ತಾಯಿ ಆಗುವ ಹಕ್ಕಿದೆ ಎಂದು ನನ್ನ ತಂದೆ ಹೇಳಿದ್ದಾರೆ. ನನ್ನ ಕನಸು, ಆಸೆಗೆ ನನ್ನ ತಂದೆ, ಒಡಹುಟ್ಟಿದವರು ಬೆಂಬಲ ನೀಡಿದ್ದಾರೆ. ಇನ್ನೂ ಕೆಲವರು ಇದರ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಏನೂ ಮಾಡಲು ಸಾಧ್ಯವಿಲ್ಲ. ನನ್ನನ್ನು ನೋಡಿ ಓರ್ವ ಮಹಿಳೆಗೆ ಪ್ರೇರಣೆ ಸಿಕ್ಕಿ, ಆಕೆ ನಾನು ಜೀವನದಲ್ಲಿ ಒಂಟಿಯಲ್ಲ ಎಂದು ಯೋಚಿಸಿದರೆ ಅದುವೇ ನನ್ನ ಜಯ ಎಂದುಕೊಳ್ಳುತ್ತೇನೆ’ ಎಂದಿದ್ದಾರೆ.
—-





Be the first to comment