ಪ್ರಕಾಶ್ ರಾಜ್

ಸೌಜನ್ಯ ಪ್ರಕರಣದ ಬಗ್ಗೆ ಧ್ವನಿ ಎತ್ತಿದ ಪ್ರಕಾಶ್ ರಾಜ್

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಧ್ವನಿ ಎತ್ತಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಪ್ರಕಾಶ್ ರಾಜ್ ಅವರು ಸೌಜನ್ಯ ಪ್ರಕರಣ ಹಾಗೂ ಧರ್ಮಸ್ಥಳದಲ್ಲಿ ದರ್ಶಕಗಳಿಂದ ಆಗಿರುವ ನಿಗೂಢ ಸಾವುಗಳ ಬಗ್ಗೆ ಒಂದು ಲಕ್ಷ ಸಹಿ ಸಂಗ್ರಹಿಸುವ ಅಭಿಯಾನವನ್ನು ಆರಂಭಿಸಿದ್ದಾರೆ.

ಸುಪ್ರೀಂ ಕೋರ್ಟ್ ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್ಐಟಿ ತನಿಖೆ ಆಗಬೇಕು. ಕೋರ್ಟ್ ಈಗಾಗಲೇ ನೀಡಿರುವ ಆದೇಶದಂತೆ ತಪ್ಪು ಮಾಡಿದ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ಅದಕ್ಕಾಗಿ change.org ನಲ್ಲಿ ಅಭಿಯಾನದಲ್ಲಿ ನಿಮ್ಮ ಸಹಿ ಹಾಕಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುನಿಯಾ ವಿಜಯ್ ಹಾಗೂ ಚೇತನ್ ಅಹಿಂಸಾ ಹೋರಾಟಕ್ಕೆ ಬೆಂಬಲ ಕೊಟ್ಟಿದ್ದಾರೆ.

ಈ ಹಿಂದೆ ನಟ ದುನಿಯಾ ವಿಜಯ್ ಅವರು, ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು. ಆದರೆ ಸೌಜನ್ಯ ಪ್ರಕರಣದ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಎಂದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿನಂತೆ ಯಾರೂ ಹೆಚ್ಚು ಸಮಯ ಮರೆ ಮಾಚಲಾಗದು – ಬುದ್ಧ ‘ ಎಂದು ಪೋಸ್ಟ್ ಮಾಡಿದ್ದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!