‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ’

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ’ ಎಂದು ನಟಿ ರಮ್ಯಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​​ನಲ್ಲಿ ವಿಚಾರಣೆ ಮುಕ್ತಾಯ ಆಗಿದೆ. ಈ ಕುರಿತು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.

‘ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ’ ಎಂದು ರಮ್ಯಾ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಹಾಗೂ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರಾಸಿಕ್ಯೂಷನ್ ಹಾಗೂ ಆರೋಪಿಗಳ ಪರ ವಕೀಲರ ವಾದವನ್ನು ಸುಪ್ರೀಂ ಕೋರ್ಟ್ ಆಲಿಸಿದೆ. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದೆ.  10 ದಿನಗಳ ನಂತರ ದರ್ಶನ್ ಜಾಮೀನು ಅರ್ಜಿ ಕುರಿತು ತೀರ್ಪು ಬರಲಿದೆ.

ದರ್ಶನ್​​ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಸುಪ್ರೀಂ ಕೋರ್ಟ್​​ನಲ್ಲಿ ಕರ್ನಾಟಕ ಸರ್ಕಾರ ಪ್ರಶ್ನಿಸಿದೆ. ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಜಾಮೀನು ನೀಡುವಾಗ ಹೈಕೋರ್ಟ್ ತೆಗೆದುಕೊಂಡ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ರೇಣುಕಾಸ್ವಾಮಿ ಹತ್ಯೆಯ ವಿವರಗಳನ್ನು ಕೇಳಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೂ ಅಚ್ಚರಿ ಆಗಿದೆ.

ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಚಿತ್ರೀಕರಣದ ಸಲುವಾಗಿ ಅವರು ವಿದೇಶಕ್ಕೆ ತೆರಳಿದ್ದಾರೆ. ಒಂದು ವೇಳೆ ಜಾಮೀನು ರದ್ದಾದರೆ ಅವರು ಪುನಃ ಜೈಲುವಾಸ ಅನುಭವಿಸಬೇಕಾಗುತ್ತದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ ಕಾರಣಕ್ಕಾಗಿ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದುಕೊಂಡು ಬಂದು ಹತ್ಯೆ ಮಾಡಲಾಗಿತ್ತು. ಬಳಿಕ ಆತನ ಶವ ಪತ್ತೆ ಆಯಿತು. ಈ ಕೇಸ್​ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರು ಆರೋಪಿಗಳಾಗಿದ್ದಾರೆ. 7 ಜನರ ಜಾಮೀನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರ,  ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

—-

 

 

This Article Has 1 Comment
  1. Pingback: MyBlog

Leave a Reply

Your email address will not be published. Required fields are marked *

Translate »
error: Content is protected !!