ರಮ್ಯಾಗೆ ಅಶ್ಲೀಲ ಕಾಮೆಂಟ್: ಇಬ್ಬರು ಅರೆಸ್ಟ್!

ಸ್ಯಾಂಡಲ್​ವುಡ್ ಕ್ವೀನ್ ರಮ್ಯಾಗೆ ಅಶ್ಲೀಲ ಕಾಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ರಮ್ಯಾ ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ ಮಾಡಿದ ಇಬ್ಬರು ಕಿಡಿಗೇಡಿಗಳನ್ನು ಬಂಧಿಸಲಾಗಿದೆ. 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು  ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

ಆರೋಪಿಗಳು  ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ಐಪಿ ಅಡ್ರೆಸ್ ಆಧರಿಸಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರಮ್ಯಾ  48 ಅಕೌಂಟ್‍ಗಳ ಮೇಲೆ ದೂರು ದಾಖಲಿಸಿದ್ದರು. ಎಫ್‍ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್‍ಗಳು ಡಿಲಿಟ್ ಆಗಿದ್ದವು. ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್‍ಗಳು ಅಕೌಂಟ್ ಡಿಟೇಲ್ಸ್ ಕೊಡುವಂತೆ ಮನವಿ ಮಾಡಿದ್ದರು.

ಪೊಲೀಸರ ಮನವಿಯಂತೆ ಸಂಬಂಧಪಟ್ಟ ಸಂಸ್ಥೆಗಳು ಡಿಲಿಟ್ ಆಗಿದ್ದ ಅಕೌಂಟ್‍ಗಳ ಎಲ್ಲಾ ಮಾಹಿತಿಯನ್ನು ಸಿಸಿಬಿ ಪೊಲೀಸರಿಗೆ ನೀಡಿವೆ.   ಅಶ್ಲೀಲ ಕಮೆಂಟ್‌ ಹಾಕಿ ಅಕೌಂಟ್ ಡಿಲಿಟ್ ಮಾಡಿ ಆರಾಮಾಗಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ರಮ್ಯಾ ದೂರಿನನ್ವಯ ಸಿಸಿಬಿಯವರು ಹಲವರನ್ನು ಗುರುತಿಸಿದ್ದಾರೆ. ಕೆಲವರ ಸ್ಪಷ್ಟ ಮಾಹಿತಿ ಸಿಕ್ಕಿದೆ.

—–

 

Be the first to comment

Leave a Reply

Your email address will not be published. Required fields are marked *

Translate »
error: Content is protected !!