‘ವಿಷ್ಣುವರ್ಧನ್ ಅವರ ಪ್ರತಿಮೆ ನಿರ್ಮಾಣಕ್ಕೆ ನಾನು ನನ್ನ ಕೈಲಾದ ಸಹಾಯವನ್ನು ಮಾಡಲಿದ್ದೇನೆ’ ಎಂದು ಸುದೀಪ್ ಹೇಳಿದ್ದಾರೆ.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ನಟ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹೇಳಿಕೆ ನೀಡಿರುವ ಸುದೀಪ್, ‘ವಿಷ್ಣು ಸರ್ ಸಮಾಧಿಯೊಟ್ಟಿಗೆ ಏನು ನಡೆಯಿತೊ ಅದು ನಡೆಯಬಾರದಿತ್ತು. ಇಲ್ಲಿ ಒಂದು ಚೆನ್ನಾಗಿ ಅರ್ಥವಾಗುತ್ತದೆ. ಒಂದೇ ಊರು, ಒಂದೇ ರಾಜ್ಯ, ನಮ್ಮದೇ ಕಲಾವಿದರು ಆದರೆ ಇಲ್ಲಿ ಒಬ್ಬೊಬ್ಬರಿಗೆ ಒಂದೊಂದು ನ್ಯಾಯ. ನಾವುಗಳು ಓಡಾಡಿದ್ದಾಯ್ತು. ನೀವುಗಳು ಹೋರಾಡಿದ್ದಾಯ್ತು, ಎಲ್ಲರಲ್ಲಿ ಮನವಿ ಮಾಡಿಕೊಂಡಿದ್ದಾಯ್ತು. ದಯವಿಟ್ಟು ಇದನ್ನು ಮಾಡಿಕೊಡಿ.ಸ್ವಲ್ಪ ಕರುಣೆ ತೋರಿಸಿ ಎಂದು ಕೇಳಿಕೊಂಡಿದ್ದಾಯ್ತು. ಅಧಿಕಾರದಲ್ಲಿರುವವರಿಗೆ ಇದು ದೊಡ್ಡ ವಿಷಯ ಆಗಿರಲಿಲ್ಲ. ಅವರ ಸಣ್ಣ ಪ್ರಯತ್ನ ಸಹ ಇಂದು ನಡೆದಿರುವುದನ್ನು ತಡೆಯುತ್ತಿತ್ತು ಎಂದು ಹೇಳಿದ್ದಾರೆ.
‘ಇನ್ನು ಮುಂದೆ ನಾವು ಭಿಕ್ಷೆ ಬೇಡಬೇಕಾದ ಅವಶ್ಯಕತೆ ಇಲ್ಲ. ಮಾಡಬೇಕು ಎಂದುಕೊಂಡಿದ್ದರೆ ಇಷ್ಟು ಹೊತ್ತಿಗೆ ಮಾಡಿರುತ್ತಿದ್ದರು. ಈಗ ಅದು ಮುಗಿದು ಹೋದ ಕತೆ. ಅದನ್ನು ಬದಿಗಿಟ್ಟು, ನಾವು ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಗಮನ ಹರಿಸೋಣ. ನಾನು ಇತ್ತೀಚೆಗಷ್ಟೆ ವೀರಕಪುತ್ರ ಶ್ರೀನಿವಾಸ್ ಅವರ ಬಳಿ ಮಾತನಾಡುತ್ತಿದ್ದೆ. ಅವರು ಕೆಲವು ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ಆದಷ್ಟು ಬೇಗ ದೊಡ್ಡ ಪ್ರತಿಮೆ ಕಟ್ಟೋಣ ಎಂದುಕೊಂಡಿದ್ದಾರೆ. ಅದನ್ನು ನಾವು ಮಾಡೋಣ. ಆ ಪ್ರತಿಮೆ ನಿರ್ಮಾಣಕ್ಕೆ ನಾನು ನನ್ನ ಕೈಲಾದ ಸಹಾಯವನ್ನು ಮಾಡಲಿದ್ದೇನೆ’ ಎಂದು ಸುದೀಪ್ ಹೇಳಿದ್ದಾರೆ.
‘ಈ ಘಟನೆ ಆಗಬಾರದಿತ್ತು. ಎಲ್ಲರಿಗೂ ನೋವಾಗಿದೆ. ರಾತ್ರೋರಾತ್ರಿ ಹೀಗೆ ಮಾಡಿದ್ದು ಹೇಡಿತನವೂ ಹೌದು. ಹೀಗೆ ಮಾಡಿದವರು ಹೇಡಿಗಳು. ಹತ್ತು ನಿಮಿಷ ಕಣ್ಣೀರು ಹಾಕಿ 11 ನೇ ನಿಮಿಷ ಮುಂದೆ ಏನು ಮಾಡಬೇಕು ಎಂದು ಯೋಚಿಸಿ ಮುಂದೆ ಹೋಗುವುದು ನನ್ನ ಅಭ್ಯಾಸ. ನೀವು ಅದನ್ನೇ ಮಾಡುತ್ತೀರ ಎಂದು ಆಶಿಸುತ್ತೇನೆ. ಕೈ ಚಾಚಿದ್ದು ಸಾಕು. ಮುಂದೆ ಏನು ಮಾಡಬೇಕೊ ಅದನ್ನು ಮಾಡೋಣ’ ಎಂದು ಸುದೀಪ್ ಅಭಿಮಾನಿಗಳಿಗೆ ಧೈರ್ಯ ಹೇಳಿದ್ದಾರೆ.
—-





Pingback: enclomiphene drug interaction
Pingback: purchase xifaxan generic from canada
Pingback: buying staxyn cheap sale