ಕಿಚ್ಚ ಸುದೀಪ್ ಅವರು ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅರ್ಧ ಎಕ್ರೆ ಜಾಗ ಖರೀದಿಸಿದ್ದು, ಡಾ. ವಿಷ್ಣುವರ್ಧನ್ ಸ್ಮಾರಕ ವಿವಾದಕ್ಕೆ ಶೀಘ್ರದಲ್ಲೇ ತಾರ್ಕಿಕ ಅಂತ್ಯ ಸಿಗುವ ಕಾಲ ಸನಿಹಿತವಾಗಿದೆ.
ಸ್ಮಾರಕ ನಿರ್ಮಾಣಕ್ಕೆ ವಿಷ್ಣುವರ್ಧನ್ ಜನ್ಮದಿನವಾದ ಸೆ. 18ರಂದು ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಪೂಜೆ ನೆರವೇರಲಿದೆ. ಬೆಂಗಳೂರಿನ ಕೆಂಗೇರಿ ಬಳಿ ಖರೀದಿಸಿರುವ ಈ ಜಾಗದಲ್ಲಿ ಗ್ರಂಥಾಲಯ, ವಿಷ್ಣು ಅವರ 25 ಅಡಿಯ ಪುತ್ಥಳಿ, ಒಂದು ಗ್ಯಾಲರಿ ನಿರ್ಮಾಣವಾಗಲಿದೆ.
ಬೆಂಗಳೂರಿನಲ್ಲಿ ಬಾಲಣ್ಣ ಕುಟುಂಬದ ಒಡೆತನದ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣು ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಸಮಾಧಿ ತೆರವುಗೊಳಿಸಿದ ವಿಚಾರವಾಗಿ ದೊಡ್ಡ ಮಟ್ಟದಲ್ಲಿ ಚರ್ಚೆ, ಪ್ರತಿಭಟನೆ ನಡೆಯುತ್ತಿದೆ.
ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸಂಬಂಧ ಮಾಹಿತಿ ನೀಡಿದ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಸೆ. 2 ಸುದೀಪ್ ಅವರ ಹುಟ್ಟುಹಬ್ಬ. ಅವರು ವಿಷ್ಣುವರ್ಧನ್ ಅಪ್ಪಟ ಅಭಿಮಾನಿ. ಸುದೀಪ್ ಅವರ ಹುಟ್ಟುಹಬ್ಬದಂದೇ ಸ್ಮಾರಕದ ನೀಲಿನಕ್ಷೆಯನ್ನು ಸ್ವತಃ ಸುದೀಪ್ ಅನಾವರಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಸೆ.18ರಂದು ವಿಷ್ಣುವರ್ಧನ್ ಹುಟ್ಟುಹಬ್ಬ ದಿನ ಸ್ಮಾರಕಕ್ಕೆ ಅಡಿಗಲ್ಲು ಹಾಕಲಾಗುವುದು. ಕೆಂಗೇರಿ ಬಳಿ ನಿರ್ಮಾಣ ಆಗುವ ಸ್ಮಾರಕ, ಅಭಿಮಾನ್ ಸ್ಟುಡಿಯೋ ಪುಣ್ಯಭೂಮಿಗೆ ಸಮ ಅಲ್ಲ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವ ಅಂಗವಾಗಿ ಒಂದು ದಿನ ಕಾರ್ಯಕ್ರಮ ಮಾಡಲು ಯೋಜಿಸಲಾಗಿದೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಈ ಸಂಭ್ರಮ ಮಾಡಲಾಗುತ್ತಿದೆ. ಇಡೀ ಚಿತ್ರರಂಗ ಭಾಗಿ ಆಗಲಿದೆ ಎಂದು ತಿಳಿಸಿದ್ದಾರೆ.
—–





Be the first to comment