ಶಿವರಾಜ್ಕುಮಾರ್ ನಟನೆಯ ಹೊಸ ಸಿನಿಮಾ ‘ಡ್ಯಾಡ್’ ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ಮುಹೂರ್ತ ಮಾಡಲಾಗಿದೆ.
ಸಿನಿಮಾದ ಮೊದಲ ದೃಶ್ಯಕ್ಕೆ ಗೀತಾ ಶಿವರಾಜ್ಕುಮಾರ್ ಅವರು ಆರಂಭ ಫಲಕ ತೋರಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ತೆಲುಗಿನ ‘ಭಗವಂತ್ ಕೇಸರಿ’, ‘ಟಕ್ ಜಗದೀಶ್’ ಮುಂತಾದ ಸಿನಿಮಾಗಳನ್ನು ನಿರ್ಮಿಸಿದ ಹರೀಶ್ ಪೆದ್ದಿ ಅವರು ‘ಡ್ಯಾಡ್’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಬಿ.ಎಸ್. ಸುಧೀಂದ್ರ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
‘ಅಸಾಧ್ಯುಡು’, ‘ಮಿಸ್ಟರ್ ನೂಕಯ್ಯ’, ‘ಹಿಡಿಂಬ’ ಸಿನಿಮಾಗಳನ್ನು ನಿರ್ದೇಶಿಸಿರುವ ಅನಿಲ್ ಕನ್ನೆಗಂಟಿ ‘ಡ್ಯಾಡ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕಥೆ, ಚಿತ್ರಕಥೆ ಅವರೇ ಬರೆದಿದ್ದಾರೆ.
ಸಿನಿಮಾದಲ್ಲಿ ಶಿವರಾಜ್ಕುಮಾರ್ ಜೊತೆ ನಟಿ ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಸೂರಜ್ ವೆಂಜರಮೂಡು ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ಸಿನಿಮಾ ಮೂಡಿಬರಲಿದೆ. ಸಿನಿಮಾದಲ್ಲಿ ಶಿವರಾಜ್ಕುಮಾರ್ ಅವರು ಡಾಕ್ಟರ್ ಪಾತ್ರ ಮಾಡುತ್ತಿದ್ದಾರೆ.
ಸಿನಿಮಾದಲ್ಲಿ ತಂದೆ ಸೆಂಟಿಮೆಂಟ್ ಕಹಾನಿ ಇರಲಿದೆ. ಅಂದಾಜು 50 ದಿನಗಳ ಕಾಲ ಬೆಂಗಳೂರು ಮತ್ತು ಮೈಸೂರಿನಲ್ಲಿ ಶೂಟಿಂಗ್ ಮಾಡಲಾಗುವುದು ಎಂದು ಚಿತ್ರತಂಡ ಹೇಳಿದೆ.
‘ಡ್ಯಾಡ್’ ಸಿನಿಮಾಗೆ ಅರ್ಜುನ್ ಜನ್ಯ ಅವರ ಸಂಗೀತ ನೀಡುತ್ತಿದ್ದಾರೆ. ಬಿ. ರಾಜಶೇಖರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.
—-





Be the first to comment