‘S/O ಮುತ್ತಣ್ಣ ಬಿಡುಗಡೆ ಮುಂದಕ್ಕೆ

ಶ್ರೀಕಾಂತ್ ಹುಣಸೂರು ನಿರ್ದೇಶಿಸಿದ ‘S/O ಮುತ್ತಣ್ಣ  ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ.

ಚಿತ್ರ  ಆಗಸ್ಟ್ 22 ರಂದು ಬಿಡುಗಡೆಯಾಗಬೇಕಿತ್ತು. ಚಿತ್ರಕ್ಕೆ ಈಗಾಗಲೇ ಕೇರಳದಲ್ಲಿ ಬೇಡಿಕೆ ಉಂಟಾಗಿದ್ದು, ಚಿತ್ರತಂಡ ಏಕಕಾಲದಲ್ಲಿ ಸೆಪ್ಟೆಂಬರ್ 12 ರಂದು   ಕನ್ನಡ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ  ಬಿಡುಗಡೆ ಮಾಡಲು ಮುಂದಾಗಿದೆ.

ಚಿತ್ರದ ಟೀಸರ್ ಮತ್ತು ಹಾಡುಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ಆಗಸ್ಟ್ 22 ರಂದು ಬಿಡುಗಡೆಯಾಗಲಿದೆ.

ಪುರಾತನ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಡೈನಾಮಿಕ್ ಹೀರೋ ದೇವರಾಜ್ ಅವರ ಪುತ್ರ ಪ್ರಣಮ್ ದೇವರಾಜ್ ‘S/O ಮುತ್ತಣ್ಣ’ ಚಿತ್ರದ ಮೂಲಕ ಸುದೀರ್ಘ ವಿರಾಮದ ನಂತರ ಬೆಳ್ಳಿತೆರೆಗೆ ಬರುತ್ತಿದ್ದಾರೆ. ಪ್ರಣಮ್‌ಗೆ ಜೋಡಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ನಟಿಸಿದ್ದಾರೆ. ರಂಗಾಯಣ ರಘು ತಂದೆಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.  ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲಾ ನಾನಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ  ಚಿತ್ರದಲ್ಲಿದ್ದಾರೆ.

ಚಿತ್ರಕ್ಕೆ ಸಚಿನ್ ಬಸ್ರೂರ್  ಸಂಗೀತ ಸಂಯೋಜಿಸಿದ್ದಾರೆ. ಯೋಗರಾಜ್ ಭಟ್ ಮತ್ತು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಛಾಯಾಗ್ರಹಣವನ್ನು  ಸ್ಕೇಟಿಂಗ್ ಕೃಷ್ಣ,  ಸಂಕಲನವನ್ನು ಹರೀಶ್ ಕೊಮ್ಮೆ ನಿರ್ವಹಿಸಿದ್ದಾರೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!