‘666 ಆಪರೇಷನ್ ಡ್ರೀಮ್ ಥಿಯೇಟರ್’ ಪೋಸ್ಟರ್ ರಿಲೀಸ್

ಹೇಮಂತ್ ಎಂ ರಾವ್ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದ ಪೋಸ್ಟರ್  ನ್ನು ಧನಂಜಯ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡ ಬಿಡುಗಡೆ ಮಾಡಿದೆ.

ಟಗರು ಮತ್ತು ಭಜರಂಗಿ 2 ಚಿತ್ರಗಳ ನಂತರ ಶಿವಣ್ಣ ಮತ್ತು ಧನಂಜಯ್ ‘666 ಆಪರೇಷನ್ ಡ್ರೀಮ್ ಥಿಯೇಟರ್‌’ ಚಿತ್ರಕ್ಕಾಗಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಪೋಸ್ಟರ್‌ನಲ್ಲಿ ಧನಂಜಯ್ ನ್ನು  ರೆಟ್ರೊ ಲುಕ್‌ನಲ್ಲಿ ತೋರಿಸಲಾಗಿದೆ. ಕಾರಿನಲ್ಲಿ ಮಲಗಿರುವ ಧನಂಜಯ್  ಸ್ಟೈಲಿಶ್ ಆಗಿ ಕೈಯಲ್ಲಿ ಬಂದೂಕು ಹಿಡಿದು ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ.

‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರದಲ್ಲಿ ಶಿವರಾಜ್‌ಕುಮಾರ್ ಮತ್ತು ಧನಂಜಯ್ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ವಿಶಿಷ್ಟ ನಿರೂಪಣೆಗಳಿಗೆ ಹೆಸರುವಾಸಿಯಾದ ನಿರ್ದೇಶಕ ಹೇಮಂತ್ ಎಂ ರಾವ್, ರೆಟ್ರೋ ಶೈಲಿಯ ಕಥೆಯನ್ನು ಹೆಣೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಚಿತ್ರತಂಡ ಸದ್ಯ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಸುತ್ತಿದೆ. ಅಲ್ಲಿ ಅದ್ದೂರಿ ಸೆಟ್  ನ್ನು ನಿರ್ಮಿಸಲಾಗಿದೆ. ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ. ಅದ್ವೈತ ಗುರುಮೂರ್ತಿ  ಛಾಯಾಗ್ರಹಣ ಮತ್ತು ವಿಶ್ವಾಸ್ ಕಶ್ಯಪ್ ಅವರ ಕಲಾ ನಿರ್ದೇಶನವಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!