ಕೆಜಿಎಫ್ ಚಿತ್ರದಲ್ಲಿ ‘ಕೆಜಿಎಫ್ ಚಾಚಾ’ ಎಂದು ಜನಪ್ರಿಯರಾದ ಹರೀಶ್ ರಾಯ್ ಅವರಿಗೆ ಥೈರಾಯ್ಡ್ ಕ್ಯಾನ್ಸರ್ ಹೊಟ್ಟೆಗೆ ಹರಡಿದ್ದು, ಚಿಕಿತ್ಸೆಗೆ ಸಹಾಯ ಮಾಡುವಂತೆ ಅವರು ಮನವಿ ಮಾಡಿದ್ದಾರೆ.
ಹರೀಶ್ ರಾಯ್ ಸಾಕಷ್ಟು ತೆಳ್ಳಗಾಗಿದ್ದಾರೆ. ಈಗ ಅವರು ಸಾವು-ಬದುಕಿನ ನಡುವೆ ಹೋರಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಅವರು ಚಿಕಿತ್ಸೆಗೆ ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಅವರನ್ನು ನೋಡಿ ಅನೇಕರು ಬೇಸರ ಹೊರಹಾಕಿದ್ದಾರೆ.
ಗೋಪಿ ಗೌಡ ಈ ಬಗ್ಗೆ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕ್ಯಾನ್ಸರ್ ಹೊಟ್ಟೆಗೆ ಸ್ಪ್ರೆಡ್ ಆಗಿ, ಹೊಟ್ಟೆಯಲ್ಲಿ ನೀರು ತುಂಬಿಕೊಂಡಿದೆ. ಅವರಿಗೆ ಸಹಾಯ ಮಾಡಿ’ ಎಂದು ಗೋಪಿ ಅವರು ಹೇಳಿದ್ದಾರೆ. ಈ ವೇಳೆ ಹರೀಶ್ ರಾಯ್ ಅವರು ಭಾವುಕರಾಗಿ ಸಹಾಯ ಬೇಡಿದ್ದಾರೆ. ‘ನನನ್ನು ಉಳಿಸಿ’ ಎಂದು ಅವರು ಫಿಲ್ಮ್ ಚೇಂಬರ್, ನಿರ್ಮಾಪಕರು, ನಿರ್ದೇಶಕರು, ಸಹ ಕಲಾವಿದರಿಗೆ ವಿಡಿಯೋ ಮೂಲಕ ಸಹಾಯ ಕೇಳಿದ್ದಾರೆ.
ಹರೀಶ್ ರಾಯ್ ಅವರು ಅನಾರೋಗ್ಯ ಕಾರಣದಿಂದ ನಟನೆಯಿಂದ ದೂರ ಉಳಿದಿದ್ದಾರೆ. ಅವರಿಗೆ ಆಸ್ಪತ್ರೆ ಖರ್ಚು ನೋಡಿಕೊಳ್ಳುವಷ್ಟು ಹಣ ಇಲ್ಲದಂತೆ ಆಗಿದೆ.
ನಟ ಹರೀಶ್ ರಾಯ್ ಅವರಿಗೆ ಸಹಾಯ ಮಾಡಲು ಇಚ್ಛಿಸುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಅಥವಾ UPI ನಂಬರ್ ಗೆ ಹಣವನ್ನು ಪಾವತಿಸಬಹುದು.
Google Pay/ PhonePe- 9606960656
Name – Harish Roy
Account Number – 38510865963
IFSC code – SBIN0004408
Bank – State Bank Of India
—–





Be the first to comment