ಜೂನ್ 14ರಂದು ‘ಸಿಂಗ’ ಚಿತ್ರದ ಥೇಟ್ರಿಕಲ್ ಟ್ರೇಲರ್ ಬಿಡುಗಡೆ

ಯು ಕೆ ಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ `ಸಿಂಗ` ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಅದಕ್ಕೂ ಮುನ್ನ ಚಿತ್ರದ ಥೇಟ್ರಿಕಲ್ ಟ್ರೇಲರ್(ಚಿತ್ರಮಂದಿರಗಳಲ್ಲಿ) ಜೂನ್14 ಬಿಡುಗಡೆಯಾಗಲಿದೆ.
ಈ ಹಿಂದೆ ‘ರಾಮ್‍ಲೀಲಾ’ ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಧರ್ಮ ವಿಶ್ ಸಂಗೀತ ನಿರ್ದೇಶನ, ಡಾ||ಕೆ.ರವಿವರ್ಮ, ಪಳನಿರಾಜ್ ಸಾಹಸ ನಿರ್ದೇಶನ, ಗಣೇಶ್ ಸಂಕಲನ ಹಾಗೂ ಶಿವಾರ್ಜುನ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಡಾ||ವಿ.ನಾಗೇಂದ್ರ ಪ್ರಸಾದ್, ಕವಿರಾಜ್ ಹಾಗೂ ಚೇತನ್ ‘ಸಿಂಗ’ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.
ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ. ರವಿಶಂಕರ್, ತಾರಾ, ಶಿವರಾಜ್ ಕೆ.ಆರ್ ಪೇಟೆ, ಅರುಣಾ ಬಾಲರಾಜ್, ರಂಜಿತಾ, ಚಂದ್ರಪ್ರಭ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 1 Comment
  1. Pingback: 카지노사이트

Leave a Reply

Your email address will not be published. Required fields are marked *

Translate »
error: Content is protected !!