ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

ಶ್ರೇಷ್ಠ ನಟ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು  ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಹಿರಿಯ ನಟಿಯರು  ಮನವಿ ಮಾಡಿದರು ಎಂದು ಸಿಎಂ ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ವಿಷ್ಣುವರ್ಧನ್ ಅವರ ಅಳಿಯ ನಟ ಅನಿರುದ್ಧ್ ಜತ್ಕರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!