‘ವಿಷ ಬೇಕು’ ಎಂದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್, ಕೋರ್ಟ್ ನಲ್ಲಿ ತನಗೆ ವಿಷ ಬೇಕು ಎಂದು ಜಡ್ಜ್ ಮುಂದೆ  ಕೇಳಿರುವ ವಿಚಾರ  ಸುದ್ದಿಗೆ ಗ್ರಾಸವಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ.   ಇದರಿಂದ ದರ್ಶನ್ ಹೈರಾಣಾಗಿ ಹೋಗಿದ್ದಾರೆ. ಈ ಕಾರಣದಿಂದ ದರ್ಶನ್   ಅವರು ಜಡ್ಜ್ ಎದುರು ಬೇಡಿಕೆ  ಇಟ್ಟಿದ್ದು, ‘ನನಗೆ ವಿಷ ನೀಡಲು ಆದೇಶಿಸಿ’ ಎಂದು  ಕೇಳಿದ್ದಾರೆ.

ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆಗಿದ್ದು, ‘ಹಾಗೆಲ್ಲ ಕೇಳಬಾರದು’ ಎಂದು ದರ್ಶನ್​ಗೆ ಕಿವಿ ಮಾತು ಹೇಳಿದ್ದಾರೆ. ಅರ್ಜಿ ವಿಚಾರಣೆ  ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ದರ್ಶನ್  ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ‘ಮನವಿ ಏನು?’ ಎಂದು ಜಡ್ಜ್ ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್​ಗೆ ಶಾಕ್ ತಂದಿದೆ.

‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ. ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ. ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಕಳೆದ ವರ್ಷ ಅರೆಸ್ಟ್ ಆಗಿದ್ದರು.  ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್​ ದರ್ಶನ್  ಜಾಮೀನನ್ನು ರದ್ದು ಮಾಡಿ  ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.

ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!