2025ರ ಬ್ಲಾಕ್ ಬಸ್ಟರ್ ಸಿನಿಮಾ ‘ಸು ಫ್ರಮ್ ಸೋ’ ‘ಜಿಯೋ ಹಾಟ್ ಸ್ಟಾರ್’ ಮೂಲಕ ವೀಕ್ಷಣೆಗೆ ಲಭ್ಯವಾಗಿದೆ.
‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ಥಿಯೇಟರ್ನಲ್ಲಿ ರಿಲೀಸ್ ಆಯಿತು. ಚಿತ್ರಮಂದಿರಗಳಲ್ಲಿ 46 ದಿನಗಳ ಕಾಲ ಯಶಸ್ವಿ ಪ್ರದರ್ಶನ ಕಂಡ ನಂತರದಲ್ಲಿ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಆದರೂ ಸಿನಿಮಾ ಉತ್ತಮ ಗಳಿಕೆ ಮಾಡುತ್ತಲೇ ಇದೆ.
ರಾಜ್ ಬಿ. ಶೆಟ್ಟಿ ಅವರು ‘ಸು ಫ್ರಮ್ ಸೋ’ ಸಿನಿಮಾದಲ್ಲಿ ನಟಿಸುವ ಜೊತೆಗೆ ನಿರ್ಮಾಣ ಮಾಡಿದ್ದಾರೆ. ನಿರ್ಮಾಪಕನಾಗಿ ಅವರು ದೊಡ್ಡ ಗೆಲುವು ಕಂಡಿದ್ದಾರೆ. ಸು ಫ್ರಮ್ ಸೋ’ ಸಿನಿಮಾ ಹಾರರ್ ಕಾಮಿಡಿ ಕಥೆ ಹೊಂದಿದೆ. ಜೆ.ಪಿ. ತುಮಿನಾಡು, ರಾಜ್ ಬಿ. ಶೆಟ್ಟಿ, ಶನೀಲ್ ಗೌತಮ್, ಸಂಧ್ಯಾ ಅರಕೆರೆ, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಪುಷ್ಪರಾಜ್ ಬೊಳ್ಳಾರ್ ಮುಂತಾದವರು ನಟಿಸಿದ್ದಾರೆ.
‘ಸು ಫ್ರಮ್ ಸೋ’ ವಿಶ್ವ ಮಟ್ಟದಲ್ಲಿ 122.34 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಚಿತ್ರ ಭಾರತದಲ್ಲಿ 107.34 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಚಿತ್ರಕ್ಕೆ ವಿದೇಶದಿಂದ 15 ಕೋಟಿ ರೂಪಾಯಿ ಹರಿದು ಬಂದಿದೆ.
—-





Be the first to comment