ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಾಮಾಜಿಕ ಜಾಲತಾಣಗಳಿಂದ ಬ್ರೇಕ್ ತೆಗೆದುಕೊಳ್ಳುವ ನಿರ್ಧಾರವನ್ನು ಘೋಷಿಸಿದ್ದಾರೆ.
ಬಾಹುಬಲಿ, ಅರುಧಂತಿ ಮುಂತಾದ ಹಿಟ್ ಸಿನಿಮಾ ನೀಡಿರುವ ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೀನಾಯ ಸೋಲು ಕಂಡಿದೆ. ಇದರ ಬೆನ್ನಲ್ಲೇ ನಟಿ ಅನುಷ್ಕಾ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ.
ಅನುಷ್ಕಾ ಶೆಟ್ಟಿ ಕೈಯಲ್ಲಿ ಬರೆದ ಲೆಟರ್ ಮೂಲಕ ಬ್ರೇಕ್ ತೆಗೆದುಕೊಳ್ಳುವ ಮಾಹಿತಿ ಹಂಚಿಕೊಂಡಿದ್ದಾರೆ. ಅನುಷ್ಕಾ “ಸೋಶಿಯಲ್ ಮೀಡಿಯಾದಿಂದ ಸ್ವಲ್ಪ ದೂರ ಸರಿಯುತ್ತಿದ್ದೇನೆ. ಮೊಬೈಲ್ ಸ್ಕ್ರೋಲಿಂಗ್ ಹೊರತಾಗಿಯೂ ಜಗತ್ತಿನ ಜೊತೆ ಸಂಪರ್ಕ ಸಾಧಿಸಬೇಕಾಗಿದೆ. ಶೀಘ್ರದಲ್ಲೇ ಮತ್ತೆ ನಿಮ್ಮೊಂದಿಗೆ ಸೇರಿಕೊಳ್ಳುತ್ತೇನೆ” ಎಂದು ಬರೆದಿದ್ದಾರೆ.

ಈ ಹಿಂದೆ ‘ವೇದಂ’, ‘ಪಯಣಂ’ ಇನ್ನೂ ಕೆಲವು ಅದ್ಭುತ ಸಿನಿಮಾಗಳನ್ನು ನೀಡಿರುವ ಕ್ರಿಶ್ ಜಗಲಮರುಡು ನಿರ್ದೇಶನದ ಇತ್ತೀಚಿಗೆ ಬಿಡುಗಡೆಯಾದ ‘ಘಾಟಿ’ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ಅಭಿನಯಿಸಿದ್ದರು. ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸಿತ್ತು. ಸಿನಿಮಾದ ಸೋಲಿನ ನಂತರ ಸೋಶಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ನೆಗೆಟಿವ್ ಕಾಮೆಂಟ್ ಗಳು ಬರುತ್ತಿದ್ದವು. ಹೀಗಾಗಿ ಅನುಷ್ಕಾ ಶೆಟ್ಟಿ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
—–





Be the first to comment