‘ಸರಿಗಮಪ’ ರಿಯಾಲಿಟಿ ಶೋನಲ್ಲಿ ‘ಶ್ರೀಕರನೇ ಶ್ರೀನಿವಾಸನೇ’ ಎಂದು ಹಾಡಿದ್ದ ಮುಸ್ಲಿಂ ಗಾಯಕಿ ಸುಹಾನಾ ಸೈಯದ್, ಹಿಂದೂ ಯುವಕನ ಜೊತೆ ಮದುವೆಗೆ ಮುಂದಾಗಿದ್ದಾರೆ.
ಸುಹಾನಾ ಸೈಯದ್ ಝೀ ಕನ್ನಡ ವಾಹಿನಿಯಲ್ಲಿ ಹಾಡಿ ನಂತರ ಮುಸ್ಲಿಂ ಮೌಲ್ವಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸುಹಾನಾ ಗಾಯಕಿಯಾಗಿ ವೃತ್ತಿಜೀವನ ಆರಂಭಿಸಿದ್ದರು. ಡೊಂಟ್ ಕೇರ್ ಸ್ವಭಾವದ ಸುಹಾನಾ ಸೈಯದ್, ಮದುವೆಯಾಗುತ್ತಿರುವುದಾಗಿ ಹೇಳಿದ್ದಾರೆ.
ನೀನಾಸಂನಲ್ಲಿ ತರಬೇತಿ ಪಡೆದಿರುವ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್, ಸುಹಾನಾ ಕೈಹಿಡಿಯಲಿರುವವರು. ತಮ್ಮ ಮದುವೆಯ ವಿಚಾರವನ್ನು ಸುಹಾನಾ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ. ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ. ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ…..ಪ್ರೇಮಕ್ಕೆ ಯಾವ ಮಿತಿ ಇಲ್ಲ ಎಂಬುದಕ್ಕೆ ನಾವೇ ಸಾಕ್ಷಿ. ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು.. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ.. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.. ನಿಮ್ಮ ಆಶೀರ್ವಾದವಿರಲಿ ಎಂದು ಸುಹಾನಾ ಪೋಸ್ಟ್ ಮಾಡಿದ್ದಾರೆ.
ಬೋಲ್ಡ್ ಲುಕ್ಸ್ ಗಾಯಕಿ ಸುಹಾನಾ ಸೈಯದ್ ಅವರು ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.
—–





Be the first to comment