ಎಸ್ ಮಹೇಂದರ್ ಚಿತ್ರದಲ್ಲಿ ಮೇಘಾ ಶೆಟ್ಟಿ

ಹಿರಿಯ ನಿರ್ದೇಶಕ ಎಸ್ ಮಹೇಂದರ್ ನಿರ್ದೇಶನದ ಮಹಿಳಾ ಪ್ರಧಾನ ಚಿತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ ಎಂದು ವರದಿಯಾಗಿದೆ. 

ನಿರ್ಮಾಪಕ ಛಲವಾದಿ ಕುಮಾರ್ ) ಈ ಯೋಜನೆಗೆ ಬೆಂಬಲ ನೀಡುತ್ತಿದ್ದಾರೆ. ಈ ಚಿತ್ರ ನಿಜ ಜೀವನದ ಘಟನೆಗಳನ್ನು ಆಧರಿಸಿದ ಆಕರ್ಷಕ ಮಹಿಳಾ ಕೇಂದ್ರಿತ ಕಥೆಯಾಗಿದೆ. ಕುಟುಂಬ ಆಧಾರಿತ ಮತ್ತು ಮಹಿಳಾ ಕೇಂದ್ರಿತ ಕಥೆಗಳಿಗೆ ಹೆಸರುವಾಸಿಯಾದ ನಿರ್ದೇಶಕ ಎಸ್ ಮಹೇಂದರ್,   ಸಾಮಾಜಿಕ ವಾಸ್ತವಗಳನ್ನು ಎತ್ತಿ ತೋರಿಸುವ ಸ್ಕ್ರಿಪ್ಟ್  ನ್ನು ರೂಪಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಮೇಘಾ ಶೆಟ್ಟಿ  ಈಗಾಗಲೇ ಅವರು ವಿನಯ್ ರಾಜ್‌ಕುಮಾರ್ ನಟನೆಯ ಗ್ರಾಮಾಯಣ ಮತ್ತು ಆಫ್ಟರ್ ಆಪರೇಷನ್ ಲಂಡನ್ ಕೆಫೆ ಚಿತ್ರಗಳಲ್ಲಿ ನಟಿಸಿದ್ದು, ಬಿಡುಗಡೆ ಎದುರು ನೋಡುತ್ತಿದ್ದಾರೆ. ಅವರು ಸದ್ಯ ಪ್ರಜ್ವಲ್ ದೇವರಾಜ್ ಅವರೊಂದಿಗೆ ಚೀತಾ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಛಾಯಾಗ್ರಾಹಕ ಕರುಣಾಕರ್  ಚಿತ್ರಕ್ಕೆ ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ.  ಶ್ರೀಧರ್ ಸಂಭ್ರಮ್ ಸಂಗೀತ ಸಂಯೋಜಿಸಲಿದ್ದಾರೆ ಎನ್ನಲಾಗಿದೆ. ಚಿತ್ರದ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ಚಿತ್ರತಂಡ ಬಹುಭಾಷೆಯಲ್ಲಿ ಚಿತ್ರ ಬಿಡುಗಡೆಗೆ ಯೋಜಿಸುತ್ತಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!