ಬಿಗ್ ಬಾಸ್ ನಿಂದ ಹೊರನಡೆದ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಸೀಸನ್ 12ರ ಮೊದಲ ದಿನವೇ  ತುಳುನಾಡಿನಿಂದ ಬಂದ ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರಿಗೆ ಗೇಟ್​ ಪಾಸ್ ನೀಡಲಾಗಿದೆ.

ಸೆಪ್ಟೆಂಬರ್ 28ರಂದು ಒಟ್ಟು 19 ಜನರು ಬಿಗ್ ಬಾಸ್ ಮನೆ ಒಳಗೆ ಕಾಲಿಟ್ಟಿದ್ದರು. ಆದರೆ ಮೊದಲ ದಿನವೇ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಇದರಿಂದ ಎಲ್ಲರಿಗೂ ಶಾಕ್ ಆಗಿದೆ. ಮೊದಲ ದಿನವೇ  ಎಲಿಮಿನೇಷನ್ ನಡೆಯುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಬಿಗ್ ಬಾಸ್ ಮನೆ ಒಳಗೆ 6 ಸ್ಪರ್ಧಿಗಳು ಒಂಟಿಗಳಾಗಿ, 5 ಸ್ಪರ್ಧಿಗಳು ಜಂಟಿಗಳಾಗಿ ಹಾಗೂ 3 ಸ್ಪರ್ಧಿಗಳು ಅತಂತ್ರರಾಗಿ   ಪ್ರವೇಶ ಮಾಡಿದ್ದರು. ರಕ್ಷಿತಾ ಶೆಟ್ಟಿ, ಮಾಳು ನಿಪನಾಳ, ಸ್ಪಂದನಾ ಅವರು ಅತಂತ್ರ ಸ್ಥಿತಿಯಲ್ಲಿ ಇದ್ದರು. ಆ ಮೂವರಲ್ಲಿ ಒಬ್ಬರನ್ನು ಹೊರಗೆ ಕಳಿಸಬೇಕು ಎಂಬ ಪರಿಸ್ಥಿತಿ ನಿರ್ಮಾಣ ಆಯಿತು. ಈ ನಿರ್ಧಾರವನ್ನು ತೆಗೆದುಕೊಳ್ಳುವ ಅಧಿಕಾರವನ್ನು 6 ಒಂಟಿಗಳಿಗೆ ನೀಡಲಾಯಿತು.

6 ಒಂಟಿಗಳ ಎದುರು ನಿಂತು ರಕ್ಷಿತಾ ಶೆಟ್ಟಿ, ಮಾಳು ನಿಪನಾಳ ಹಾಗೂ ಸ್ಪಂದನಾ ಅವರು ತಮ್ಮ ಸಾಮರ್ಥ್ಯದ ಬಗ್ಗೆ ಮನವೊಲಿಸಲು ಪ್ರಯತ್ನಿಸಿದರು. ಮಾಳು ನಿಪನಾಳ ಮತ್ತು ಸ್ಪಂದನಾ ಅವರನ್ನು ಉಳಿಸಿಕೊಂಡು ರಕ್ಷಿತಾ ಶೆಟ್ಟಿಗೆ ಗೇಪ್​ ಪಾಸ್ ನೀಡಲಾಯಿತು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!