ಕಾಂತಾರ-ಚಾಪ್ಟರ್ 1 ಭರ್ಜರಿ ಪ್ರದರ್ಶನ

ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ-ಚಾಪ್ಟರ್ 1 ಚಿತ್ರ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ  ಚಿತ್ರ  ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾ ಇಂದು  ವಿಶ್ವಾದ್ಯಂತ ಬಿಡುಗಡೆಯಾಗಿದೆ. ಕಳೆದ ರಾತ್ರಿ ಬೆಂಗಳೂರು ಸೇರಿದಂತೆ ಹಲವೆಡೆ ಪ್ರೀಮಿಯರ್ ಶೋ ಇಡಲಾಗಿದ್ದು, ಅದರಿಂದಲೇ ಕೋಟಿ ರೂಪಾಯಿ ಬಾಚಲಾಗಿದೆ. ದುಬಾರಿ ಟಿಕೆಟ್ ಬೆಲೆ ಮತ್ತು ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದುಬಂದಿದೆ.  ಸೋಷಿಯಲ್ ಮೀಡಿಯಾಗಳಲ್ಲಿ ಇಂದು ಪ್ರೇಕ್ಷಕರ ಅಭಿಪ್ರಾಯ, ವಿಮರ್ಶೆ ತುಂಬಿಹೋಗಿವೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ  ರಿಷಬ್ ಶೆಟ್ಟಿ, ಕ್ರಿ.ಶ.4-5 ಶತಮಾನದ ಕದಂಬರ ಆಳ್ವಿಕೆಯ ಸಮಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಒಂದು ಮಾಯಾವಿ ಲೋಕವನ್ನು ನೋಡುಗನ ಮುಂದಿರಿಸಿದ್ದಾರೆ. ಸಿನಿಮಾದಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ. ಸಿನಿಮಾಗೆ ರಿಷಬ್ ಶೆಟ್ಟಿ ನಾಯಕ.  ನಾಯಕಿ ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್. ಪ್ರಮುಖ ಪಾತ್ರವರ್ಗದಲ್ಲಿ ಜಯರಾಂ, ಕುಲ್ಶನ್ ದೇವಯ್ಯ ಮೊದಲಾದವರು  ನಟಿಸಿದ್ದಾರೆ.

2022ರ ಅಕ್ಟೋಬರ್ ತಿಂಗಳಲ್ಲಿ ಕಾಂತಾರ ಚಿತ್ರ ಬಿಡುಗಡೆಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿತ್ತು. ‘ಕಾಂತಾರ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಬಗ್ಗೆ ರಿಷಬ್ ಹೇಳಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!