‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಕೇವಲ ಎರಡು ದಿನಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ.
ಕಾಂತಾರ: ಚಾಪ್ಟರ್ 1’ ಮೊದಲ ದಿನ 62 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಆಗಿದೆ. ಈ ಸಿನಿಮಾ ಎರಡನೇ ದಿನ 43.65 ಕೋಟಿ ರೂಪಾಯಿ ಗಳಿಸಿದೆ. ಭಾರತದಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರ 105.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಕೆಜಿಎಫ್ 2’ ಬಳಿಕ ಎರಡೇ ದಿನಕ್ಕೆ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಚಿತ್ರ ಇದಾಗಿದೆ.
ರಿಷಬ್ ಶೆಟ್ಟಿ ನಿರ್ದೇಶನ, ನಾಯಕ ನಟರಾಗಿ ನಟಿಸಿರುವ ರುಕ್ಮಿಣಿ ವಸಂತ್ ನಾಯಕಿಯಾಗಿ, ಪ್ರಮುಖ ಪಾತ್ರದಲ್ಲಿ ಗುಲ್ಶನ್ ದೇವಯ್ಯ, ಜಯರಾಂ ಮೊದಲಾದವರು ನಟಿಸಿದ್ದಾರೆ.
ಕಾಂತಾರಾ-ಚಾಪ್ಟರ್ 1 ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ದಂಪತಿ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ‘ನಿಮ್ಮ ದೃಢನಿಶ್ಚಯ, ಭಕ್ತಿ ಪ್ರತಿ ಚೌಕಟ್ಟಿನಲ್ಲೂ ಸ್ಪಷ್ಟವಾಗಿ ಗೋಚರಿಸುತ್ತದೆ. ಬರಹಗಾರ, ನಿರ್ದೇಶಕ ಮತ್ತು ನಟನಾಗಿ, ನಿಮ್ಮ ದೃಷ್ಟಿಕೋನವು ಪರದೆಯ ಮೇಲೆ ನಿಜವಾಗಿಯೂ ತಲ್ಲೀನಗೊಳಿಸುವ ಅನುಭವವಾಗಿ ರೂಪಾಂತರಗೊಂಡಿದೆ. ಮಹತ್ವಾಕಾಂಕ್ಷೆಯ ಕೆಲಸಗಳಿಗೆ ನಿಮ್ಮ ದೂರದೃಷ್ಟಿ ಮತ್ತು ಬೇಷರತ್ತಾದ ಬೆಂಬಲವು ಚಿತ್ರೋದ್ಯಮದ ಮಟ್ಟವನ್ನು ನಿರಂತರವಾಗಿ ಹೆಚ್ಚಿಸುತ್ತದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಯಶ್ ಬರೆದುಕೊಂಡಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ರಿಷಬ್ ಶೆಟ್ಟಿ, ನಿಮ್ಮ ಪಯಣ ಮತ್ತು ದೃಷ್ಟಿಕೋನ ಯಾವಾಗಲೂ ನಮಗೆ ಸ್ಫೂರ್ತಿ. ನಿಮ್ಮ ಸಾಧನೆಯನ್ನು ಇಂದು ನಿಂತು ನೋಡುವುದು ನನಗೆ ಹೆಮ್ಮೆಯ ಸಂಗತಿ. ನನ್ನ ಜೊತೆ ನಿಂತು ನನ್ನ ಕೆಲಸಕ್ಕೆ ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಕಾಂತಾರ ಚಿತ್ರ ನೋಡಿ ಮನಸ್ಸಿಗೆ ಮುದವಾಯಿತು ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ.





Be the first to comment