ದೊಡ್ಡಹಟ್ಟಿ ಬೋರೇಗೌಡ

‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ದೊಡ್ಡಹಟ್ಟಿ ಬೋರೇಗೌಡ

ಕೆ.ಎಂ. ರಘು

2021ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕೆ.ಎಂ. ರಘು ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

ದ್ವಿತೀಯ ಹಾಗೂ ತೃತೀಯ ಅತ್ಯುತ್ತಮ ಚಿತ್ರವಾಗಿ 777 ಚಾರ್ಲಿ ಮತ್ತು ಬಿಸಿಲು ಕುದುರೆ ಚಿತ್ರಗಳು ಆಯ್ಕೆಯಾಗಿವೆ.  ಅತ್ಯುತ್ತಮ ಚಿತ್ರಕಥೆಗೆ  ‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರ ಭಾಜನವಾಗಿದೆ.

777 ಚಾರ್ಲಿ ಚಿತ್ರದ ಅಭಿನಯಕ್ಕಾಗಿ ರಕ್ಷಿತ್‍ ಶೆಟ್ಟಿ ಅವರಿಗೆ ಅತ್ಯುತ್ತಮ ನಟ,  ಮ್ಯೂಟ್‍ ಚಿತ್ರದಲ್ಲಿನ ಅಭಿನಯಕ್ಕಾಗಿ ಅರ್ಚನಾ ಜೋಯಿಸ್‍ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ.

ರತ್ನನ್ ಪ್ರಪಂಚ’ ಸಿನಿಮಾದ ಅಭಿನಯಕ್ಕಾಗಿ ಪ್ರಮೋದ್  ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಕೇಕ್’ ಚಿತ್ರದ ನಟನೆಗೆ ಮಾಸ್ಟರ್ ಅತೀಶ್ ಶೆಟ್ಟಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ನೀಡಲಾಗಿದೆ. ‘ಭೈರವಿ’ ಸಿನಿಮಾದ ಅಭಿನಯಕ್ಕಾಗಿ ಬೇಬಿ ಭೈರವಿಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ ನೀಡಲಾಗಿದೆ.

ವಿಶೇಷ ಸಾಮಾಜಿಕ ಕಳಕಳಿ ಚಿತ್ರ ಪ್ರಶಸ್ತಿಯನ್ನು ‘ಭಾರತದ ಪ್ರಜೆಗಳಾದ ನಾವು’ ಸಿನಿಮಾಗೆ ನೀಡಲಾಗಿದೆ. ಪುನೀತ್ ರಾಜ್​​ಕುಮಾರ್ ನಟನೆಯ ‘ಯುವರತ್ನ’ ಚಿತ್ರಕ್ಕೆ ‘ಅತ್ಯುತ್ತಮ ಜನಪ್ರಿಯ ಮನರಂಜನಾ ಸಿನಿಮಾ’ ಪ್ರಶಸ್ತಿ ಘೋಷಿಸಲಾಗಿದೆ. ‘ಕೇಕ್’ ಸಿನಿಮಾಗೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ ಸಿಕ್ಕಿದೆ. ಶಂಕರ್ ಗುರು ಅವರಿಗೆ ‘ಬಡವ ರಾಸ್ಕಲ್’ ಚಿತ್ರಕ್ಕಾಗಿ ‘ಅತ್ಯುತ್ತಮ ಚೊಚ್ಚಲ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ.

‘ಬಿಸಿಲು ಕುದುರೆ’ ಸಿನಿಮಾದ ಸಂಗೀತಕ್ಕಾಗಿ ಇಮ್ತಿಯಾಜ್ ಸುಲ್ತಾನ್ ಅವರಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!