ಬಿಗ್ ಬಾಸ್ ಮನೆಯಲ್ಲಿ ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸದ ಹಿನ್ನೆಲೆಯಲ್ಲಿ ಮುಖ್ಯ ದ್ವಾರಕ್ಕೆ ಮಂಗಳವಾರ ಸಂಜೆ ಬೀಗ ಹಾಕಿ ಸ್ಪರ್ಧಿಗಳನ್ನು ಹೊರಗೆ ಕಳುಹಿಸಲಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಲೀಟರ್ ನೀರು ಬಳಕೆ ಮಾಡುತ್ತಿದ್ದು, ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಹಿಂದೆ ನೋಟಿಸ್ ಜಾರಿ ಮಾಡಿತ್ತು. ಈಗ ಸ್ಟುಡಿಯೋಗೆ ಬೀಗ ಜಡಿಯಲಾಗಿದೆ.
ಪರಿಸರ ಕಾಯಿದೆ ಉಲ್ಲಂಘನೆ ಹಿನ್ನಲೆಯಲ್ಲಿ ಬಿಗ್ ಬಾಸ್ ಸೀಸನ್ 12 ಮುಚ್ಬಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ ಮಾಡಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಕ್ಸ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ.
ಬಿಗ್ ಬಾಸ್ ಕನ್ನಡದ 12ನೇ ಆವೃತ್ತಿ ಶುರುವಾಗಿ ಒಂದೇ ವಾರಕ್ಕೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಆಯೋಜನೆ ಮಾಡುತ್ತಿರುವ ಕಲರ್ಸ್ ಕನ್ನಡ ವಾಹಿನಿ ಈಗ ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ. ಇಂದು ಕಾರ್ಯಕ್ರಮ ಪ್ರಸಾರ ಆಗುವ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಫೇಸ್ಬುಕ್ ಪೇಜ್ ನಲ್ಲಿ ತಿಳಿಸಿದೆ. ಜಿಯೋ ಹಾಟ್ ಸ್ಟಾರ್ ನಲ್ಲಿ ಈ ಹಿಂದಿನ ಲೈವ್ ಪ್ರಸಾರ ಮಾಡಲಾಗುತ್ತಿದೆ.
ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದಾರೆ. ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಯಾವ ರೀತಿ ಮುಂದುವರೆಯುತ್ತದೆ ಎನ್ನುವ ಕುತೂಹಲ ವೀಕ್ಷಕರನ್ನು ಕಾಡಿದೆ.






Be the first to comment