ನಿರ್ದೇಶಕ ಶ್ರೀನಿವಾಸ್ ರಾಜು ಅವರ ಚಿತ್ರದ ಮೂಲಕ ಮಾಳವಿಕಾ ಶರ್ಮಾ ಕನ್ನಡಕ್ಕೆ ಪದಾರ್ಪಣೆ ಮಾಡಲಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್‌ಗೆ ಇನ್ನೂ ಹೆಸರಿಡದ ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದಾರೆ. ದೇವಿಕಾ ಭಟ್ ಅಧಿಕೃತವಾಗಿ ಚಿತ್ರತಂಡ ಸೇರ್ಪಡೆಗೊಂಡಿದ್ದಾರೆ. ಮಾಳವಿಕಾ ಶರ್ಮಾ ಈ ತಿಂಗಳು ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಮಾಳವಿಕಾ ಶರ್ಮಾ ಈ ಚಿತ್ರದ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎನ್ನಲಾಗಿದೆ. ಮಾಳವಿಕಾ, ತೆಲುಗು ಮತ್ತು ತಮಿಳು ಚಿತ್ರಗಳಾದ ನೆಲ ಟಿಕೆಟ್ (2018), ರೆಡ್ (2021), ಕಾಫಿ ವಿತ್ ಕಾದಲ್ (2022), ಭೀಮಾ (2024) ಮತ್ತು ಹರೋಮ್ ಹರಾ (2024) ಚಿತ್ರಗಳಲ್ಲಿ ನಟಿಸಿದ್ದಾರೆ.
ಗಣೇಶ್ ಈ ಚಿತ್ರದ ಮೂಲಕ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರು ಸಂಗೀತ, ಕೃಷಿ ಮತ್ತು ಪ್ರಕೃತಿಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿರುವ ಬೌದ್ಧಿಕ ಪಾತ್ರವನ್ನು ನಿರ್ವಹಿಸಿಸುತ್ತಿದ್ದಾರೆ.
ಈಗಾಗಲೇ ಚಿತ್ರದ ಶೇ 60ರಷ್ಟು ಚಿತ್ರೀಕರಣವನ್ನು ಮೈಸೂರಿನ ಹಲವು ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ. ಕೇರಳ, ಉತ್ತರ ಭಾರತ ಮತ್ತು ಭೂತಾನ್‌ನ ಸುಂದರವಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ರೂಪಿಸಲಾಗಿದೆ.
ಚಿತ್ರಕ್ಕೆ ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ, ಹೇಶಮ್ ಅಬ್ದುಲ್ ವಹಾಬ್ ಅವರ ಸಂಗೀತ ಸಂಯೋಜನೆ, ವಿಜಯ್ ಈಶ್ವರ್ ಮತ್ತು ಕ್ರಾಂತಿ ಕುಮಾರ್ ಸಂಭಾಷಣೆ ಬರೆದಿದ್ದಾರೆ. 2026ರ ಆರಂಭದಲ್ಲಿ ಚಿತ್ರ ಬಿಡುಗಡೆ ಮಾಡುವ ಗುರಿಯನ್ನು ಚಿತ್ರತಂಡ ಹೊಂದಿದೆ.
—-





Be the first to comment