ಕನ್ನಡಕ್ಕೆ ಬಂದ ಪ್ರಿಯಾಂಕಾ ಮೋಹನ್

ಹ್ಯಾಟ್ರಿಕ್ ಹೀರೋ ಶಿವರಾಜ್​​ಕುಮಾರ್ ಹಾಗೂ ಡಾಲಿ ಧನಂಜಯ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ಗೆ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ.

ಹೇಮಂತ್ ಎಂ.ರಾವ್ ನಿರ್ದೇಶನದ 80ರ ದಶಕದ ಬಾಂಡ್- ಸ್ಪೈ ಕಥೆ ಹೊಂದಿರುವ ಚಿತ್ರ  ‘666 ಆಪರೇಷನ್ ಡ್ರೀಮ್ ಥಿಯೇಟರ್’ಗೆ ಸೇರ್ಪಡೆಗೊಂಡಿದ್ದಾರೆ. ಪವರ್ ಸ್ಟಾರ್ ಪವನ್ ಕಲ್ಯಾಣ್, ನಾನಿ, ಧನುಷ್ ಹಾಗೂ ಶಿವಕಾರ್ತಿಕೇಯನ್ ಜೊತೆ ಅಭಿನಯಿಸಿರುವ ಪ್ರಿಯಾಂಕಾ ಎಂಟ್ರಿ  ಸಿನಿಮಾ ಪ್ರೇಮಿಗಳ ಕುತೂಹಲ ಹೆಚ್ಚಿಸಿದೆ.

“ನಾನು  ಶಿವರಾಜ್ ಕುಮಾರ್  ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದಿದ್ದೇನೆ. ‘666 ಆಪರೇಷನ್ ಡ್ರೀಮ್ ಥಿಯೇಟರ್’ ನ ಭಾಗವಾಗುವ ಮೂಲಕ ನನ್ನ ಕನಸು ನನಸಾಗಿದೆ. ಧನಂಜಯ ಅವರೊಂದಿಗೆ ಕೆಲಸ ಮಾಡುವುದು ಮತ್ತು ಪಾತ್ರವರ್ಗದ ಭಾಗವಾಗುವುದನ್ನು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ. ಹೇಮಂತ್ ಎಂ ರಾವ್ ಅವರೊಂದಿಗೆ ಕೆಲಸ ಮಾಡುವ ಬಯಕೆ ವ್ಯಕ್ತಪಡಿಸಿದ್ದೆ. ಆದರೆ ಅದು ಇಷ್ಟು ಬೇಗ ಆಗುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಪ್ರಿಯಾಂಕಾ ಮೋಹನ್ ಹೇಳಿದ್ದಾರೆ.

ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದ್ದಾರೆ.   ಎರಡು ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಡಿಸೆಂಬರ್ ಮೊದಲ ವಾರದಲ್ಲಿ ಮೂರನೇ ಹಂತದ ಶೂಟಿಂಗ್ ನಡೆಸಲು ಯೋಜನೆ ಹಾಕಿಕೊಂಡಿದೆ.

ಈ ಹಿಂದೆ ‘ಒಂದ್ ಕಥೆ ಹೇಳ್ಲಾ’ ಸಿನಿಮಾದಲ್ಲಿ ಪ್ರಿಯಾಂಕಾ ನಟಿಸಿದ್ದರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!