ಬಹುನಿರೀಕ್ಷಿತ ಕನ್ನಡದ ಪ್ಯಾನ್ ಇಂಡಿಯಾ ‘45’ ಚಿತ್ರದ ಬಜೆಟ್ ಅಂದಾಜು 100 ಕೋಟಿ ರೂಪಾಯಿ ಎಂಬ ಮಾಹಿತಿ ಚಿತ್ರರಂಗದಲ್ಲಿ ಕೇಳಿ ಬಂದಿದೆ.
ಉಪೇಂದ್ರ, ಶಿವರಾಜ್ ಕುಮಾರ್, ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆಯಾಗುತ್ತಿದೆ. ಅರ್ಜುನ್ ಜನ್ಯ ಅವರ ಮೊದಲ ನಿರ್ದೇಶನದ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಭಾರೀ ಬಜೆಟ್ ನಲ್ಲಿ ಚಿತ್ರವನ್ನು ನಿರ್ಮಿಸಿದ್ದಾರೆ.
ಚಿತ್ರತಂಡ ಬಜೆಟ್ ಬಗ್ಗೆ ಅಧಿಕೃತ ಮಾಹಿತಿ ನೀಡದಿದ್ದರೂ ಸುಮಾರು 100 ಕೋಟಿಯ ಹೂಡಿಕೆ ನಡೆದಿದೆ ಎಂದು ಮೂಲಗಳು ಹೇಳುತ್ತಿವೆ. ಬಜೆಟ್ ಬಗ್ಗೆ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ “ಕಥೆಗೆ ಎಷ್ಟು ಬೇಕೋ ಅಷ್ಟು ಖರ್ಚು ಮಾಡಿದ್ದೇವೆ. ಇದು ಯೂನಿವರ್ಸಲ್ ಸಬ್ಜೆಕ್ಟ್” ಎಂದು ಸ್ಪಷ್ಟಪಡಿಸಿದ್ದಾರೆ.
ನಿರ್ದೇಶಕ ಅರ್ಜುನ್ ಜನ್ಯ “ನಿರ್ಮಾಪಕ ರಮೇಶ್ ಅವರಿಂದ ಸಂಪೂರ್ಣ ಬೆಂಬಲ ಸಿಕ್ಕಿತು. ಯಾವುದೇ ರಾಜಿ ಮಾಡಿಕೊಳ್ಳದೆ ಸಿನಿಮಾ ಮಾಡಿದ್ದೇವೆ. ಸಿಜಿ ಕೆಲಸಕ್ಕೆ ಹೆಚ್ಚು ಸಮಯ ಮೀಸಲಿಟ್ಟಿದ್ದೇವೆ. ಸಿನಿಮಾದಲ್ಲಿನ ಸುಮಾರು 45% ವಿಜುವಲ್ ಗ್ರಾಫಿಕ್ಸ್ನಿಂದ ಕೂಡಿದೆ” ಎಂದು ಹೇಳಿದ್ದಾರೆ.
ಅರ್ಜುನ್ ಜನ್ಯ ನಿರ್ದೇಶನದ ಜೊತೆಗೆ ಸಂಗೀತ ಸಂಯೋಜಿಸಿದ್ದು, ಸತ್ಯ ಹೆಗಡೆ ಛಾಯಾಗ್ರಹಣ ಮಾಡಿದ್ದಾರೆ.
—-





Be the first to comment