ರಾಕಿಂಗ್ ಸ್ಟಾರ್ ಯಶ್ ಅವರು ಟಾಕ್ಸಿಕ್ ಚಿತ್ರದ ಕುರಿತು ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.
ಸಿನಿಮಾ ಬಿಡುಗಡೆ ದಿನಾಂಕವನ್ನು ತಿಳಿಸಿ ಯಶ್ ಅವರು, ಚಿತ್ರ ಬಿಡುಗಡೆಗೆ ಇನ್ನು ಕೇವಲ 100 ದಿನಗಳು ಮಾತ್ರ ಬಾಕಿ ಇದೆ ಎಂದು ಹೇಳಿದ್ದಾರೆ. ಪೋಸ್ಟರ್ ಹಂಚಿಕೊಂಡಿರುವ ಯಶ್, ‘ಕಾಲ್ಪನಿಕ ಕಥೆ ಬಿಡುಗಡೆ ಆಗಲು 100 ದಿನ ಬಾಕಿ ಇದೆ’ ಎಂದು ಕ್ಯಾಪ್ಷನ್ ಬರೆದಿದ್ದಾರೆ.
ಇದೇ ವೇಳೆ ಚಿತ್ರ ತಂಡ ಕೂಡ ಪೋಸ್ಟರ್ ಬಿಡುಗಡೆ ಮಾಡಿದೆ. ಪೋಸ್ಟರ್ ನಲ್ಲಿ ವ್ಯಕ್ತಿಯೊಬ್ಬ ಬಾತ್ಟಬ್ನಲ್ಲಿ ಕೂತಿದ್ದಾರೆ. ಆ ಬಾತ್ ಟಬ್ನ ಅಂಚುಗಳಲ್ಲಿ ರಕ್ತ ಕಂಡು ಬಂದಿದೆ. ಬಾತ್ ಟಬ್‌ನಿಂದಲೇ ವ್ಯಕ್ತಿ ಕಿಟಕಿ ಹೊರಗೆ ನೋಡುತ್ತಿದ್ದಾರೆ. ವ್ಯಕ್ತಿಯ ಬೆನ್ನಿನ ಮೇಲೆ ಟ್ಯಾಟೂ ಕಂಡು ಬಂದಿದೆ. ಬಿಡುಗಡೆ ಆಗಿರುವ ಪೋಸ್ಟರ್ ಆಸಕ್ತಿಕರವಾಗಿದ್ದು, ಹಾಲಿವುಡ್ ಸಿನಿಮಾಗಳ ಫೀಲ್ ನೀಡುತ್ತಿದೆ.
‘ಟಾಕ್ಸಿಕ್’ ಸಿನಿಮಾವನ್ನು ಮಲಯಾಳಂ ನಟಿ, ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕರ್ನಾಟಕದ ಅತಿ ದೊಡ್ಡ ಬಜೆಟ್ನ ಸಿನಿಮಾ ಟಾಕ್ಸಿಕ್ ಆಗಿದೆ.
ಸಿನಿಮಾನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್ ನಾಯಕಿಯರಾಗಿ ನಟಿಸಿದ್ದಾರೆ. ಟಾಕ್ಸಿಕ್ ಚಿತ್ರ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.
—–





Be the first to comment