ನಟರಾದ ಶಿವರಾಜ್‌ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ’45’ ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕು ದಾಖಲೆಯ ಮೊತ್ತಕ್ಕೆ ಜೀ ನೆಟ್‌ವರ್ಕ್ ಪಾಲಾಗಿದೆ.
ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ ’45’ ಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ನಂತರ, Zee5 ನಲ್ಲಿ ಪ್ರಸಾರವಾಗುವ ನಿರೀಕ್ಷೆಯಿದೆ. ಜೀ ನೆಟ್‌ವರ್ಕ್ ಸ್ಯಾಟಲೈಟ್ ಪ್ರಸಾರವನ್ನು ಸಹ ನಿರ್ವಹಿಸುತ್ತದೆ. 45 ಚಿತ್ರ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕುಗಳನ್ನು ಚಿತ್ರ ಬಿಡುಗಡೆಗೂ ಮುನ್ನವೇ ಮಾರಾಟ ಮಾಡುವ ಮೂಲಕ ದೃಢ ಹೆಜ್ಜೆಯನ್ನು ಇಟ್ಟಿದೆ.
45 ಚಿತ್ರ ಡಿಸೆಂಬರ್ 25 ರ ಕ್ರಿಸ್‌ಮಸ್ ದಿನದಂದು ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಕರ್ನಾಟಕದಲ್ಲಿ ಚಿತ್ರದ ವಿತರಣೆಯ ಜವಾಬ್ದಾರಿ ಹೊಂದಿದೆ. ಜೀ ಸ್ಟುಡಿಯೋಸ್ ಉತ್ತರ ಭಾರತದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಿದೆ. ಮೈತ್ರಿ ಮೂವಿ ಮೇಕರ್ಸ್ ತೆಲುಗು ಆವೃತ್ತಿ, ಎಜಿಎಸ್ ತಮಿಳು ಆವೃತ್ತಿ ಮತ್ತು ದುಲ್ಕರ್ ಸಲ್ಮಾನ್ ಅವರ ವೇಫೇರರ್ ಫಿಲ್ಮ್ಸ್ ವರ್ಪೂರ್ವ ಬ್ಯಾನರ್ ಮೂಲಕ ಮಲಯಾಳಂ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ.
ಸೂರಜ್ ಪ್ರೊಡಕ್ಷನ್ಸ್ ನಿರ್ಮಿಸಿದ 45 ಚಿತ್ರದ ಟ್ರೇಲರ್ ನ್ನುಬೆಂಗಳೂರು ಮತ್ತು ಕರ್ನಾಟಕದ ಇತರ ಐದು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲಾಯಿತು.
—-





Be the first to comment