ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಿರೂಪಣೆಯ ಬಗ್ಗೆ ಟೀಕೆಗಳು ಕೇಳಿಬರುತ್ತಿರುವ ವಿಚಾರಕ್ಕೆ ಸಂಬಂಧಿಸಿ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ 12 ಸೀಸನ್ಗಳಿಂದ ಸುದೀಪ್ ಅವರು ಬಿಗ್ ಬಾಸ್ ಕನ್ನಡ ಶೋವನ್ನು ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಇತ್ತೀಚಿನ ಕೆಲವು ಸೀಸನ್ಗಳಲ್ಲಿ ಸುದೀಪ್ ಅವರ ನಿರೂಪಣೆಯ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ವಿಡಿಯೋ ಮಾಡಿ ಸುದೀಪ್ ಅವರ ನಿರೂಪಣೆಯಲ್ಲಿ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.
‘ಬಿಗ್ ಬಾಸ್ ಕಾರ್ಯಕ್ರಮವನ್ನು ಅಷ್ಟೊಂದು ಜನ ನೋಡುತ್ತಿದ್ದಾರೆ ಎನ್ನುವುದೇ ಖುಷಿಯ ವಿಚಾರ. ಶೋನಲ್ಲಿ ನನ್ನ ಸ್ಥಾನ ಅನೇಕರಿಗೆ ಸ್ಫೂರ್ತಿ ಆಗಿದೆ. ಅವರವರ ಮನೆಯಲ್ಲೇ ಒಂದು ವೇದಿಕೆ ಮಾಡಿಕೊಂಡು ಮಾತನಾಡುತ್ತಾರೆ. ಅವರು ನೀಡುವ ಕೆಲವು ವಿವರಣೆಗಳಲ್ಲಿ ಅರ್ಥವೂ ಇರುತ್ತದೆ. ಎಲ್ಲವನ್ನೂ ನಾನು ನಿರ್ಲಕ್ಷಿಸುವುದಿಲ್ಲ’ ಎಂದು ಸುದೀಪ್ ಹೇಳಿದ್ದಾರೆ.
‘ಎಲ್ಲರ ವಿಡಿಯೋಗಳನ್ನು ನಾನು ನೋಡುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಬಗ್ಗೆ ದೂರು ಇರುತ್ತದೆ. ಪ್ರಧಾನ ಮಂತ್ರಿ ಮೇಲೆಯೂ ಜನರಿಗೆ ದೂರು ಇರುತ್ತದೆ. ಆದರೆ ಅವರು ಯಾಕೆ ಆ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ಅವರಿಗೆ ಮಾತ್ರ ಗೊತ್ತು. ಬಿಗ್ ಬಾಸ್ ವೇದಿಕೆ ಮೇಲೆ ನಿಂತಾಗ ಮಾತ್ರ ಅಲ್ಲಿ ಇರುವ ಪರಿಸ್ಥಿತಿ ಅರ್ಥವಾಗುತ್ತದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
—–





Be the first to comment