ಅತಿ ಹೆಚ್ಚು ಕಲೆಕ್ಷನ್ ಮಾಡಿದ ‘ಧುರಂದರ್’

2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಆಗಿ ರಣವೀರ್ ಸಿಂಗ್ ನಟನೆಯ ‘ಧುರಂದರ್’  ಹೊರ ಹೊಮ್ಮಿದೆ.

‘ಕಾಂತಾರ: ಚಾಪ್ಟರ್ 1’ 2025ರ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿತ್ತು. ಈ ಚಿತ್ರದ ದಾಖಲೆಯನ್ನು  ‘ಧುರಂಧರ್’ ಮುರಿದು ಹಾಕಿದೆ. ‘ಧುರಂಧರ್’ ಚಿತ್ರದ ವಿಶ್ವ ಮಟ್ಟದ ಕಲೆಕ್ಷನ್ 935 ಕೋಟಿ ರೂ. ಎಂದು ಅಂದಾಜಿಸಲಾಗಿದೆ.  ಈ ಚಿತ್ರ  ಶೀಘ್ರವೇ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವ ಎಲ್ಲಾ ಸಾಧ್ಯತೆ ಇದೆ. ‘ಕಾಂತಾರ: ಚಾಪ್ಟರ್ 1’ ಚಿತ್ರದ ಒಟ್ಟಾರೆ ಕಲೆಕ್ಷನ್ 850 ಕೋಟಿ ರೂ. ಆಗಿತ್ತು.

‘ಧುರಂಧರ್’  ಹಲವು ದೇಶಗಳಲ್ಲಿ  ಬ್ಯಾನ್ ಆಗಿದೆ. ಆದರೂ ಸಿನಿಮಾ ಕಲೆಕ್ಷನ್ ತಗ್ಗಿಲ್ಲ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​​ನಲ್ಲಿ 600 ಕೋಟಿ ರೂ. ಗಳಿಸಿದೆ. ಈ ವೀಕೆಂಡ್ ಒಳಗೆ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂ. ಕ್ಲಬ್ ಸೇರುವ ಸಾಧ್ಯತೆ ಇದೆ.

‘ಧುರಂಧರ್’ ಸಿನಿಮಾದಲ್ಲಿ ರಣವೀರ್ ಸಿಂಗ್,  ಆದಿತ್ಯ ಧಾರ್  ನಟಿಸಿದ್ದಾರೆ. ಈ ಸಿನಿಮಾ ಸಾಕಷ್ಟು ನೆಗೆಟಿವ್ ಟಾಕ್ ಪಡೆದಿತ್ತು. ಆದರೂ  ‘ಧುರಂಧರ್’ ಬಾಕ್ಸ್ ಆಫೀಸ್​​ನಲ್ಲಿ  ಗೆದ್ದು ಬೀಗಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!