ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಜನನಾಯಗನ್’ ಬಿಡುಗಡೆ ಮುಂದೂಡಿಕೆಯಾಗಿದೆ.
ಜನನಾಯಗನ್’ ಚಿತ್ರ ಜನವರಿ 9ರಂದು ಸಿನಿಮಾ ಅದ್ಧೂರಿಯಾಗಿ ವಿಶ್ವದಾದ್ಯಂತ ರಿಲೀಸ್ ಆಗಬೇಕಿತ್ತು. ಚಿತ್ರ ಬಿಡುಗಡೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಸೆನ್ಸಾರ್ ಕುರಿತ ಅಂಶಗಳು ಚಿತ್ರ ಬಿಡುಗಡೆಗೆ ಅಡ್ಡಿಯಾಗಿದೆ ಎಂದು ಹೇಳಲಾಗುತ್ತಿದೆ.
ಮೊದಲ ಬಾರಿ ಸೆನ್ಸಾರ್‌ಗೆ ಸಿನಿಮಾವನ್ನು ತೋರಿಸಿದ ಬಳಿಕ ಕೆಲವು ತಿದ್ದುಪಡಿಗಳನ್ನು ಮಾಡುವಂತೆ ಸೂಚಿಸಲಾಗಿತ್ತು. ಸೆನ್ಸಾರ್ ಮಂಡಳಿ ಸೂಚನೆ ಮೇರೆಗೆ ಬದಲಾವಣೆಗಳನ್ನು ಮಾಡಿ ಮರು ವೀಕ್ಷಣೆಗೆ ನೀಡಲಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಿಲ್ಲ. ಸೆನ್ಸಾರ್ ಮಂಡಳಿ ಹಾಗೂ ‘ಜನ ನಾಯಗನ್’ ತಂಡದ ನಡುವೆ ಗೊಂದಲಗಳು ಶುರುವಾಗಿ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಚೆನ್ನೈ ಹೈಕೋರ್ಟ್ ಮೆಟ್ಟಿಲೇರಿತ್ತು. ಸಿನಿಮಾ ಬಿಡುಗಡೆ ಮಾಡುವ ಬಗ್ಗೆ ತೀರ್ಪನ್ನು ಜನವರಿ 9ರಂದು ಮುಂದೂಡಲಾಗಿದೆ.
ಜನ ನಾಯಗನ್’ ಸಿನಿಮಾದ ಕೆಲವು ದೃಶ್ಯಗಳ ಬಗ್ಗೆ ಸೆನ್ಸಾರ್ ಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ. ಸಿನಿಮಾದಲ್ಲಿ ಸೇನೆಯ ಚಿಹ್ನೆಗಳನ್ನು ಯಾವುದೇ ಅನುಮತಿ ಇಲ್ಲದೆ ಬಳಸಿದಕ್ಕೆ ಸೆನ್ಸಾರ್ ಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿದೆ.
‘ಜನ ನಾಯಗನ್’ ಸಿನಿಮಾದಲ್ಲಿ ಪಾಕಿಸ್ತಾನ ಹಾಗೂ ಪಾಕ್ ಸೈನ್ಯದ ವಿರುದ್ಧದ ಸಂಭಾಷಣೆಗಳು ಮತ್ತು ದೃಶ್ಯಗಳು ಕಾಣಿಸಿಕೊಂಡಿವೆ. ಈ ಅಂಶಗಳನ್ನು ಆಕ್ಷೇಪಿಸಿ ಸಿನಿಮಾಗೆ ಸೌದಿ ಅರೆಬಿಯಾದಲ್ಲಿ ನಿಷೇಧ ಹೇರಲಾಗಿದೆ.
‘ಜನ ನಾಯಗನ್’ ಸಿನಿಮಾ ತೆಲುಗಿನ ‘ಭಗವಂತ ಕೇಸರಿ’ ಚಿತ್ರದ ರೀಮೇಕ್ ಆಗಿದೆ. ಸಿನಿಮಾವನ್ನು ಎಚ್. ವಿನೋದ್ ನಿರ್ದೇಶನ ಮಾಡಿದ್ದಾರೆ. ವಿಜಯ್ ಸಾಕು ಪುತ್ರಿಯಾಗಿ ಮಲಯಾಳಂ ನಟಿ ಮಮಿತಾ ಬಿಜು, ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ.
—-





Be the first to comment