ಜನಪ್ರಿಯ ನಟಿ ಕಾರುಣ್ಯ ರಾಮ್ ಅವರು ಹಣಕಾಸು ವಂಚನೆಗೆ ಸಂಬಂಧಿಸಿದಂತೆ ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ತಮ್ಮ ಸಹೋದರಿ ಸಮೃದ್ಧಿ ರಾಮ್, ಮನೆಯಲ್ಲಿರುವ ಹಣ, ಚಿನ್ನ ದುರುಪಯೋಗ ಪಡಿಸಿಕೊಂಡು ಮನೆ ಬಿಟ್ಟು ಹೋಗಿದ್ದಾರೆ ಎಂದು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಾರುಣ್ಯ ರಾಮ್ ದೂರು ದಾಖಲಿಸಿದ್ದಾರೆ.
ಸಮೃದ್ಧಿ ರಾಮ್ ಬೆಟ್ಟಿಂಗ್ ಆಡಿ ಸುಮಾರು 25 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ಸಾಲ ತೀರಿಸಲು ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಕಾರುಣ್ಯ ಉಲ್ಲೇಖಿಸಿದ್ದಾರೆ.
ಈ ಹಿಂದೆಯೇ ಕಾರುಣ್ಯ ರಾಮ್ ಅವರು ಸಮೃದ್ಧಿ ವಿರುದ್ಧ ನೀಡಿದ್ದ ದೂರು ಆಧರಿಸಿ ಆರ್.ಆರ್. ನಗರ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು. ಇದೀಗ ವಂಚನೆ, ಬೆದರಿಕೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡಿರುವುದಕ್ಕೆ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ.
ಕಾರುಣ್ಯ ರಾಮ್ ಜೊತೆಗೆ ವಾಸಿಸುತ್ತಿದ್ದ ಸಮೃದ್ಧಿ ರಾಮ್ ಮನೆಗೆ ಬಂದು ಗಲಾಟೆ ನಡೆಸಿದ್ದಾರೆ. ವಾಟ್ಸ್ಆಪ್ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಅಶ್ಲೀಲವಾಗಿ ಕಾಮೆಂಟ್ ಮಾಡಿ ನಿಂದನೆ ಮಾಡಿದ್ದಾರೆ. “ಅವಾರ್ಡ್ ಫಾರ್ ಚೀಟರ್ಸ್” ಸೇರಿದಂತೆ ನಿಂದನೆಯ ಪದಗಳನ್ನು ಬಳಸಿ ಹಿಂಸಾತ್ಮಕ ವರ್ತನೆ ತೋರಿದ್ದಾರೆ ಎಂದು ಕಾರುಣ್ಯ ರಾಮ್ ದೂರು ನೀಡಿದ್ದಾರೆ.
ಸಿಸಿಬಿ ಪೊಲೀಸರು ಪ್ರಕರಣ ಪರಿಶೀಲನೆ ನಡೆಸುತ್ತಿದ್ದಾರೆ.





Be the first to comment