‘ಜನ ನಾಯಗನ್’ ಬಿಡುಗಡೆಗೆ ಪಿತೂರಿ!

ದಳಪತಿ ವಿಜಯ್ ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಜನ ನಾಯಗನ್’ ಬಿಡುಗಡೆಗೆ ಪಿತೂರಿ ನಡೆಸುತ್ತಿದ್ದಾರೆ ಎಂಬ ಆರೋಪಗಳು  ಜೋರಾಗಿವೆ.

ಕೆಲವೇ ತಿಂಗಳಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯ ಘೋಷಣೆ ಸಾಧ್ಯತೆ ಇದೆ. ಚುನಾವಣೆ ಘೋಷಣೆ ಆದರೆ ಸ್ವತಃ ಅಭ್ಯರ್ಥಿಯಾಗಿರುವ ವಿಜಯ್ ಅವರ ಸಿನಿಮಾ ಬಿಡುಗಡೆ  ಅಸಾಧ್ಯವಾಗಬಹುದು ಎಂಬ ಆತಂಕ ಹೆಚ್ಚಾಗಿದೆ.

‘ಜನ ನಾಯಗನ್’  ಜನವರಿ 9ರಂದು ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸೆನ್ಸಾರ್ ಮಂಡಳಿ  ಸಿನಿಮಾಕ್ಕೆ ಪ್ರಮಾಣ ಪತ್ರ ನೀಡದೇ  ಸಿನಿಮಾ ಬಿಡುಗಡೆ ಸಾಧ್ಯವಾಗಲಿಲ್ಲ. ಇದರಿಂದ ಅಸಮಾಧಾನಗೊಂಡ ನಿರ್ಮಾಣ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿ ಹೈಕೋರ್ಟ್ ಆರಂಭದಲ್ಲಿ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವಂತೆ ಆದೇಶ ನೀಡಿತ್ತು. ಆದರೆ ಕೇವಲ ಕೆಲವೇ ಗಂಟೆಗಳಲ್ಲಿ ತನ್ನದೇ ಆದೇಶಕ್ಕೆ ತಡೆ ನೀಡಿದ್ದು ಚಿತ್ರತಂಡಕ್ಕೆ ಆಘಾತವಾಯಿತು. ಇದರಿಂದ ಬೇಸತ್ತ ಚಿತ್ರತಂಡ ಸುಪ್ರೀಂಕೋರ್ಟ್‌ಗೆ ಮೊರೆ ಹೋಯಿತು.

ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಕರಣವನ್ನು ಮದ್ರಾಸ್ ಹೈಕೋರ್ಟ್‌ನಲ್ಲಿಯೇ ಇತ್ಯರ್ಥ ಮಾಡಿಕೊಳ್ಳಿ ಎಂದು ಸೂಚಿಸಿತು. ಈ ಅರ್ಜಿಯ ವಿಚಾರಣೆ ನಡೆಸುವ  ಆಸಕ್ತಿ ಇಲ್ಲ ಎಂದು ನ್ಯಾಯಾಲಯ ಹೇಳಿದ್ದು, ಚಿತ್ರತಂಡಕ್ಕೆ  ಹಿನ್ನಡೆಯಾಗಿ ಪರಿಣಮಿಸಿದೆ.

ಈ ಹಿಂದೆ ಆದೇಶಕ್ಕೆ ತಡೆ ನೀಡಿದ್ದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಜನವರಿ 23ರಂದು ನಡೆಸುವುದಾಗಿ ತಿಳಿಸಿತ್ತು. ಜನವರಿ 23ರಂದು ಹೈಕೋರ್ಟ್ ವಿಚಾರಣೆ ನಡೆದರೂ ಅಂದು ಸ್ಪಷ್ಟ ಆದೇಶ ಹೊರಬರುವ ಸಾಧ್ಯತೆ ಕಡಿಮೆ  ಇದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!