ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್

ನಟ  ಜಗ್ಗೇಶ್ ಅವರು ಸಿನಿಮಾ ಪೈರಸಿ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದಾರೆ.

ಈ ಕುರಿತು ಜಗ್ಗೇಶ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪೈರಸಿ ವಿರುದ್ಧ ಕೇಂದ್ರ ಸರ್ಕಾರದಿಂದ ಕಠಿಣ ಕ್ರಮಗಳ ಭರವಸೆ ದೊರೆತಿದೆ. ಆದರೆ ಚಿತ್ರರಂಗದವರಿಂದ ಪೈರಸಿ ವಿರುದ್ಧ ಬೆಂಬಲ ಸಿಗದ ಕುರಿತು ಅವರು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯ ಶೂನ್ಯ ವೇಳೆಯಲ್ಲಿ ಮಾತನಾಡಿದ ಜಗ್ಗೇಶ್,  ಆಧುನಿಕ ತಂತ್ರಜ್ಞಾನ ಬಳಸಿ ಪೈರಸಿ ಮಾಡುವವರನ್ನು ಪತ್ತೆ ಹಚ್ಚಿ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಇದರ ಪರಿಣಾಮವಾಗಿ ಪೈರಸಿ ಆ್ಯಪ್‌ಗಳನ್ನು ಬಂದ್ ಮಾಡುವ ನಿರ್ಧಾರಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

“45 ವರ್ಷ ಚಿತ್ರರಂಗದ ಅನ್ನ ತಿಂದ ನಾನು ಅದರ ಋಣ ತೀರಿಸಲು ಮುಂದಾದಾಗ ಯಾರೂ ಬೆಂಬಲ ನೀಡಲಿಲ್ಲ. ಈ ಹೋರಾಟದಲ್ಲಿ ಕನ್ನಡ ಚಿತ್ರರಂಗದವರಿಂದ ತಮಗೆ ನಿರೀಕ್ಷಿತ ಬೆಂಬಲ ದೊರೆಯಲಿಲ್ಲ ” ಎಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಜಗ್ಗೇಶ್ ಅವರ ಪೈರಸಿ ವಿರುದ್ಧದ ಹೋರಾಟಕ್ಕೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಪೈರಸಿಯಿಂದಾಗಿ   ‘ದಿ ಡೆವಿಲ್’, ‘ಮಾರ್ಕ್’, ‘45’ ಸೇರಿದಂತೆ ಹಲವು ಕನ್ನಡ ಸಿನಿಮಾಗಳು  ನಷ್ಟ ಅನುಭವಿಸಿದ್ದವು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!