ದಾಂಪತ್ಯ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ  ಖಳ ನಟನಾಗಿ ಖ್ಯಾತಿ ಪಡೆದಿರುವ ಉಗ್ರಂ ಮಂಜು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕೋಲಾರದ ಮಂಜುನಾಥ್ ಗೌಡ ಕುಟುಂಬಸ್ಥರ ಸಮ್ಮುಖದಲ್ಲಿ ಸಂಧ್ಯಾ ಜೊತೆಗೆ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಸ್ಪರ್ಶ್ ಆಸ್ಪತ್ರೆಯಲ್ಲಿ ಸಂಧ್ಯಾ ಅವರು ಅಡ್ಮಿನ್ ಡಿಪಾರ್ಟ್ಮೆಂಟ್‌ನಲ್ಲಿದ್ದಾರೆ.

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡಿದ ಉಗ್ರಂ ಮೂವಿಯಲ್ಲಿ ಖಳ ನಟನಾಗಿ ಅಮೋಘವಾಗಿ ಅಭಿನಯ ಮಾಡಿದ್ದರು. ಈ ಸಿನಿಮಾದಿಂದಲೇ ಮಂಜು ಅವರಿಗೆ ಉಗ್ರಂ ಎನ್ನುವುದು ಹೆಸರಿನೊಂದಿಗೆ ತಳುಕು ಹಾಕಿಕೊಂಡಿದೆ.

ಕೆಲ ತಿಂಗಳ ಹಿಂದೆ ಉಗ್ರಂ ಮಂಜು ಅವರ ನಿಶ್ಚಿತಾರ್ಥ ಕುಟುಂಬಸ್ಥರ ಸಮ್ಮುಖದಲ್ಲಿ ನಡೆದಿತ್ತು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!