ಪ್ರಜ್ವಲ್ ದೇವರಾಜ್ ನಟಿಸಿರುವ ‘ಕರಾವಳಿ’ ಸಿನಿಮಾದ ‘ಮುದ್ದು ಗುಮ್ಮ’ ಹಾಡು ರಿಲೀಸ್ ಆಗಿದೆ.
ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಹಾಡು ಬಿಡುಗಡೆ ಆಗಿದ್ದು, ಹಾಡಿಗೆ ಖ್ಯಾತ ಗಾಯಕ ಸಿದ್ ಶ್ರೀರಾಮ್ ದನಿಯಿದೆ. ರೊಮ್ಯಾಂಟಿಂಕ್ ಹಾಡಿನಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಂಪದಾ ನಟಿಸಿದ್ದು ಈ ಜೋಡಿ ಮುದ್ದಾಗಿ ಕಾಣಿಸಿಕೊಂಡಿದೆ.
‘ಮುದ್ದು ಗುಮ್ಮ’ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ. ಹಾಡಿನ ಜೊತೆಗೆ ವಿಡಿಯೋ ಸಹ ಗಮನ ಸೆಳೆದಿದೆ. ಮನಮೋಹಕ ಹಿನ್ನೆಲೆಯಲ್ಲಿ ಹಾಡಿನ ಚಿತ್ರೀಕರಣವನ್ನು ನಿರ್ದೇಶಕ ಗುರುದತ್ ಗಣಿಗ ಮಾಡಿದ್ದಾರೆ. ಸಿನಿಮಾಕ್ಕೆ ಸಚಿನ್ ಬಸ್ರೂರು ಸಂಗೀತ ನೀಡಿದ್ದಾರೆ.
ಟೀಸರ್ ಮೂಲಕ ನಿರೀಕ್ಷೆ ಮೂಡಿಸಿರುವ ‘ಕರಾವಳಿ’ ಈಗ ಹಾಡು ಮೂಲಕ ನಿರೀಕ್ಷೆಯನ್ನು ಹೆಚ್ಚಿಸಿದೆ. ಕರಾವಳಿ ಭಾಗದ ಸಂಸ್ಕೃತಿ, ಸೊಗಡು, ಆಚರಣೆಗಳ ಕತೆ ಹೊಂದಿರುವ ಸಿನಿಮಾ ಇದಾಗಿದೆ. ಪ್ರಜ್ವಲ್ ದೇವರಾಜ್ ಜೊತೆಗೆ ರಾಜ್ ಬಿ ಶೆಟ್ಟಿ ಮಾವೀರ ಎನ್ನುವ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಮಿತ್ರ, ರಮೇಶ್ ಇಂದಿರ, ಶ್ರೀಧರ್ ನಟಿಸಿದ್ದಾರೆ.
ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ಗಾಣಿಗ ಫಿಲ್ಮ್ಸ್‌ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
—-





Be the first to comment