ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

ಖ್ಯಾತ ಗೀತರಚನೆಕಾರ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಆಯ್ಕೆಗಾಗಿ ರಚಿಸಲಾದ ಆಯ್ಕೆ ಸಮಿತಿ ಸಭೆ ನಡೆಸಿ, ಕನ್ನಡ ಚಿತ್ರರಂಗಕ್ಕೆ ಮಹತ್ವದ ಕೊಡುಗೆ ನೀಡಿರುವ ಮೂರು ಗಣ್ಯ ವ್ಯಕ್ತಿಗಳನ್ನು ಶಿಫಾರಸು ಮಾಡಿತ್ತು. ಈ ಶಿಫಾರಸುಗಳನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಸರ್ಕಾರಕ್ಕೆ ಸಲ್ಲಿಸಿ ಅಂತಿಮ ಅನುಮೋದನೆ ಕೋರಿದ್ದರು.

ಪ್ರಸ್ತಾವನೆ ಪರಿಶೀಲಿಸಿ ಕನ್ನಡ ಚಿತ್ರರಂಗಕ್ಕೆ ಹಂಸಲೇಖ ಅವರು ಗೀತರಚನೆಕಾರರಾಗಿ ಹಾಗೂ ಸಂಗೀತ ನಿರ್ದೇಶಕರಾಗಿ ನೀಡಿರುವ  ದೀರ್ಘಕಾಲಿಕ ಕೊಡುಗೆಯನ್ನು ಪರಿಗಣಿಸಿ ಅವರನ್ನು ಜೀವಮಾನ ಸಾಧನಾ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದಾನ ಮಾಡಲಾಗುವ ಜೀವಮಾನ ಸಾಧನಾ ಪ್ರಶಸ್ತಿ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ. ಹಂಸಲೇಖ ಅವರು  80 ಮತ್ತು 90ರ ದಶಕದಲ್ಲಿ ಜಾನಪದ ಸೊಗಡನ್ನು ಪಾಶ್ಚಾತ್ಯ ಸಂಗೀತದೊಂದಿಗೆ ಸಮ್ಮಿಲನಗೊಳಿಸಿ, ಕನ್ನಡ ಸಿನಿರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಟಿಸಿದರು. ಅವರು ಸಂಗೀತ ನಿರ್ದೇಶನಕ್ಕೆ ಸೀಮಿತವಾಗದೆ ಗೀತ ರಚನೆ, ಚಿತ್ರಕಥೆ, ನಿರ್ದೇಶನದಲ್ಲೂ ಯಶಸ್ಸು ಕಂಡರು.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!