ಚಂದ್ರಚೂಡ್ ವಿರುದ್ಧ FIR

ನಿರ್ಮಾಪಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ನಟ  ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೆಲ ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಸಪ್ಲೈ ಮಾಡುತ್ತಾರೆ ಎಂದು ಚಕ್ರವರ್ತಿ ಚಂದ್ರಚೂಡ್ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಕನ್ನಡ ಚಿತ್ರ ನಿರ್ಮಾಪಕರ ಪರವಾಗಿ ನಿರ್ಮಾಪಕ ಕೆ.ಮಂಜು ಉಪ್ಪಾರಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರಂಭದಲ್ಲಿ ಪೊಲೀಸರು NCR ದಾಖಲಿಸಿದ್ದರು. ಈಗ ಕೋರ್ಟ್ ಅನುಮತಿ ಪಡೆದು ಚಂದ್ರಚೂಡ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

‘ನಾನು ಮಾತನಾಡಿರುವುದು ತಮಿಳು ಚಿತ್ರರಂಗ,  ಅಲ್ಲಿಯ ವಾತಾವರಣ,  ಅಲ್ಲಿನ ರಾಜಕೀಯ ವ್ಯವಸ್ಥೆಯ ಬಗ್ಗೆ ಹೊರತು ಕನ್ನಡ ನಿರ್ಮಾಪಕರ ಬಗ್ಗೆ, ಕನ್ನಡ ಚಿತ್ರರಂಗದ ಬಗ್ಗೆ  ಅಲ್ಲ’ ಎಂದು ಚಕ್ರವರ್ತಿ ಚಂದ್ರಚೂಡ್ ಹೇಳಿದ್ದಾರೆ.

“ಕಮೋಡ್ ಟು ಕಾಂಡೋಮ್ “ಅನ್ನುವ ಉಪಮೆಯನ್ನು ಬಳಸಿದ್ದೇನೆ  ವಿನಃ ಯಾವುದೇ ನಿರ್ಮಾಪಕರ ವಿರುದ್ಧ ಅಲ್ಲ. ಒಬ್ಬ ಕನ್ನಡ ನಿರ್ಮಾಪಕ ತಮಿಳು ರಾಜಕೀಯಕ್ಕೆ ಹೇಗೆ ಸಿಲುಕಿದ್ದಾರೆ ಎಂಬ ಹಿನ್ನೆಲೆಯಲ್ಲೂ  ದನಿ ಎತ್ತಿದ್ದೇನೆ. ತಮಿಳು ಚಿತ್ರರಂಗದಲ್ಲಿ ಕೆಲಸ ಮಾಡಿದ ಅನುಭವ ಇರುವುದರಿಂದ ಅಲ್ಲಿ ನಾಯಕ ಕೇಂದ್ರೀತ ವಾತಾವರಣ ಮತ್ತು ಅದರ ಪರಿಣಾಮಗಳನ್ನು ವಿವರಿಸಿದ್ದೇನೆ.  ಯಾವುದೇ ನಿರ್ಮಾಪಕರು ಇದರಿಂದ ನೊಂದುಕೊಳ್ಳುವ ಅವಶ್ಯಕತೆ  ಇಲ್ಲ’ ಎಂದು  ತಿಳಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!