ಎಆರ್‌ವಿ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿಗೆ 7 ಕೋಟಿ ರೂ. ಹಣ ಬೇಡಿಕೆ ಇಟ್ಟು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕೃಷಿ ತಾಪಂಡ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈ ಹಿಂದೆ ಕೃಷಿ ತಾಪಂಡ, ಅರವಿಂದ್ ರೆಡ್ಡಿ ವಿರುದ್ಧ ಮಾನಸಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ಅರವಿಂದ್ ರೆಡ್ಡಿ, ನಟಿಗಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದು, ಹಣಕ್ಕಾಗಿ ನಟಿತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದರು.
ಇತ್ತೀಚೆಗೆ ಅರವಿಂದ್ ರೆಡ್ಡಿಗೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಮಹಿಳೆಗೆ ಸಂಬಂಧಿಸಿದ ಪ್ರಕರಣವನ್ನು ಬಗೆಹರಿಸುವ ಜೊತೆಗೆ 7 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಅರವಿಂದ್ ರೆಡ್ಡಿ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರು, ಮೆಕ್ಯಾನಿಕ್ ಒಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ವೈಶಾಖ್ ಎಂದು ಗುರುತಿಸಲಾಗಿದ್ದು, ಆತ ಕೃಷಿ ತಾಪಂಡ ಆಪ್ತ ಎನ್ನಲಾಗಿದೆ.
ವೈಶಾಖ್ ತನ್ನ ಮೊಬೈಲ್ ಫೋನ್ ನ್ನು ಕೃಷಿ ತಾಪಂಡ ಮನೆಯಲ್ಲೇ ಅಡಗಿಸಿಟ್ಟಿದ್ದಾನೆ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ತಾಪಂಡ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
—-





Be the first to comment