ಸಾಧು ಕೋಕಿಲಾ, ಮಂಡ್ಯ ರಮೇಶ್‌ಗೆ ರಿಲೀಫ್

ಕನ್ನಡ ಚಿತ್ರರಂಗದ ಖ್ಯಾತ ನಟ, ಸಂಗೀತ ನಿರ್ದೇಶಕ  ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ದಾಖಲಾಗಿದ್ದ 2017ರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಮೈಸೂರಿನ ಪಾರ್ಲರ್‌ ಒಂದರಲ್ಲಿ ಮಸಾಜ್ ಮಾಡಿಸಿಕೊಂಡ ಬಳಿಕ ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಸಾಧು ಕೋಕಿಲಾ ಮತ್ತು  ಮಂಡ್ಯ ರಮೇಶ್   ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾದ ನಂತರ ಇಬ್ಬರು ನಟರಿಗೆ ಸಮನ್ಸ್ ಜಾರಿಯಾಗಿತ್ತು. ಈಗ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಇಬ್ಬರು ನಟರಿಗೆ  ರಿಲೀಫ್ ಲಭಿಸಿದೆ.

2019ರಲ್ಲಿ  ಪ್ರಕರಣದ ಮುಂದಿನ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿತ್ತು. ಪ್ರಕರಣದಲ್ಲಿ ಎಫ್‌ಐಆರ್‌ನಲ್ಲಿ ಸ್ಪಷ್ಟ ಹೆಸರುಗಳಿಲ್ಲ. ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ವಾದ ಮಂಡಿಸಿದ್ದರು.

ವಾದವನ್ನು ಪರಿಗಣಿಸಿದ ನ್ಯಾ. ಎಂ.ಜಿ. ಉಮಾ ಅವರಿದ್ದ ಹೈಕೋರ್ಟ್ ಪೀಠ,  ಅಗತ್ಯವಾದ ಪ್ರಾಥಮಿಕ ಸಾಕ್ಷ್ಯಗಳ ಕೊರತೆ ಇದೆ ಎಂದು ಹೇಳಿ ಪ್ರಕರಣವನ್ನು ರದ್ದುಪಡಿಸಿದೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!