ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಭಾಗಿ ಆಗಿದ್ದಾಗ ಹೃದಯಾಘಾತವಾಗಿ ನಿಧನ ಹೊಂದಿದ್ದಾರೆ.

ಇಂದು ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಿದ್ದಾಗ ಜೋ ಸೈಮನ್ ಅವರಿಗೆ ಎದೆ ನೋವು ಕಂಡು ಬಂತು. ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮೂಲತಃ ಮಂಡ್ಯದವರಾಗಿದ್ದ ಜೋ ಸೈಮನ್   ಸಿನಿಮಾ ನಿರ್ದೇಶನ, ನಟನೆ ಮಾಡುವ ಜೊತೆಗೆ ಸಿನಿಮಾ ಸಂಬಂಧಿ ಸಂಘ-ಸಂಸ್ಥೆಗಳಲ್ಲಿ  ಸಕ್ರಿಯರಾಗಿದ್ದರು.  ಚಲನಚಿತ್ರ ಸಂಘದಲ್ಲಿ  ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದರು.

1977 ರಲ್ಲಿ ‘ಒಂದು ಪ್ರೇಮದ ಕತೆ’ ಸಿನಿಮಾ ನಿರ್ದೇಶನ ಮಾಡಿದರು.  ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರೊಟ್ಟಿಗೆ ಆಪ್ತ ಗೆಳೆತನ ಹೊಂದಿದ್ದ ಜೋ ಸೈಮನ್, ‘ಸಿಂಹ ಜೋಡಿ’, ‘ಸಾಹಸ ಸಿಂಹ’, ‘ಹಾಂಕಾಂಗ್​​ನಲ್ಲಿ ಏಜೆಂಟ್ ಅಮರ್’, ‘ಸ್ನೇಹದ ಕಡಲಲ್ಲಿ’, ‘ರವಿವರ್ಮ’, ‘ಟೈಂ ಬಾಂಬ್’  ಸೇರಿದಂತೆ ಅನೇಕ  ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ಜೋ ಸೈಮನ್ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಿರ್ದೇಶಕ, ನಟ ಹಾಗೂ ಗೀತರಚನೆಕಾರರಾಗಿ ಸೇವೆ ಸಲ್ಲಿಸಿದ್ದರು.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!