ಕನ್ನಡದ ಕಿರುತೆರೆ ನಟಿ ರಶ್ಮಿ ಲೀಲಾ ಅವರು ಶ್ವಾಸಕೋಶದ ಸಮಸ್ಯೆಯಿಂದ ಸೋಮವಾರ ನಿಧನರಾಗಿದ್ದಾರೆ.
ಪಲ್ಮನರಿ ಫೈಬ್ರೋಸಿಸ್‌ನಿಂದ ಬಳಲುತ್ತಿದ್ದ ರಶ್ಮಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಕೆಲ ದಿನಗಳ ಹಿಂದೆ ಸೂಕ್ತ ದಾನಿಗಳು ಬಂದ ಹಿನ್ನಲೆಯಲ್ಲಿ ಶ್ವಾಸಕೋಶದ ಟ್ರಾನ್ಸ್ ಪ್ಲಾಂಟ್ ಮಾಡಲಾಗಿತ್ತು. ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದರೆ ಇಂದು ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸುದ್ದಿಯನ್ನು ಅವರ ಪತಿ ಸಾರಕ್ಕಿ ಮಂಜು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
2019 ರಿಂದ ಪಲ್ಮನರಿ ಫೈಬ್ರೋಸಿಸ್‌ನಿಂದ ರಶ್ಮಿ ಲೀಲಾ ಬಳಲುತ್ತಿದ್ದರು. ಅವರಿಗೆ ಕಳೆದ ಫೆಬ್ರವರಿಯಲ್ಲಿ ಲಂಗ್ ಟ್ರಾನ್ಸ್ ಪ್ಲಾಂಟ್ ಆಗಿತ್ತು ಎನ್ನಲಾಗಿದೆ. ಇದಕ್ಕಾಗಿ ಆರ್ಥಿಕ ಸಹಾಯ ಕೋರಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಲಾಗಿತ್ತು. ಚಿಕಿತ್ಸೆಗೆ 19 ಲಕ್ಷ ರೂಪಾಯಿಗಳ ಅಗತ್ಯವಿದೆ ಎಂದು ಸಾರಕ್ಕಿ ಮಂಜು ಬರೆದುಕೊಂಡಿದ್ದರು.
ರಶ್ಮಿ ಲೀಲಾ ಅವರ ನಿಧಾನಕ್ಕೆ ಕಿರುತೆರೆಯ ನಟರು, ನಿರ್ದೇಶಕರು ಸಂತಾಪ ವ್ಯಕ್ತಪಡಿಸಿದ್ದಾರೆ. ರಶ್ಮಿ ಲೀಲಾ ಅವರು ಪಾ ಪ ಪಾಂಡು ಸೇರಿದಂತೆ ಹಲವು ಕಿರುತೆರೆ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಜನಪ್ರಿಯತೆಯನ್ನು ಗಳಿಸಿದ್ದರು.
__





Be the first to comment