ರಾಜ್ ಬಿ ಶೆಟ್ಟಿ ‘ಪಾಕೆಟ್ ನಾವೆಲ್’ ಎಂಬ ಹೊಸ ಸಿನಿಮಾದ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.
ಕನ್ನಡ ಹಾಗೂ ಮಲಯಾಳಂ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಟ ರಾಜ್ ಬಿ ಶೆಟ್ಟಿ ಕಾಲಿವುಡ್ ಪ್ರವೇಶ ಮಾಡುತ್ತಿರುವುದು ಅಧಿಕೃತವಾಗಿದೆ. ಫೆಬ್ರವರಿ 16ರಂದು ‘ಪಾಕೆಟ್ ನಾವೆಲ್’ ಚಿತ್ರದ ಫಸ್ಟ್ ಪೋಸ್ಟರ್ ಬಿಡುಗಡೆಗೊಂಡಿದ್ದು, ರಾಜ್ ಬಿ ಶೆಟ್ಟಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರವನ್ನು ಖ್ಯಾತ ನಿರ್ದೇಶಕ ತ್ಯಾಗರಾಜನ್ ಕುಮಾರರಾಜ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ನಾಯಕಿಯಾಗಿ ಮಾಳವಿಕಾ ಮೋಹನನ್ ಆಯ್ಕೆಯಾಗಿದ್ದಾರೆ. ಕನ್ನಡದ ಖ್ಯಾತ ನಟ ಕಿಶೋರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸೃಜನಶೀಲ ಹಾಗೂ ಪ್ರಯೋಗಾತ್ಮಕ ಚಿತ್ರಗಳಿಗೆ ರಾಜ್ ಬಿ ಶೆಟ್ಟಿ ಅವರು ಹೆಸರಾಗಿದ್ದಾರೆ. ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿರುವ ಅವರು ಹೇಗೆ ಕಾಣುತ್ತಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಮೂಡಿದೆ.
ಸು ಫ್ರಮ್ ಸೋ ಕನ್ನಡ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ಅವರು ವಿಭಿನ್ನ ಪಾತ್ರದಲ್ಲಿ ಗಮನ ಸೆಳೆದಿದ್ದರು.

—–





Be the first to comment