24 ಗಂಟೆಗಳಲ್ಲಿ ದಾಖಲೆ ಬರೆದ ಟಾಕ್ಸಿಕ್ ಟೀಸರ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಟೀಸರ್ ಕೇವಲ 24 ಗಂಟೆಗಳಲ್ಲಿ ಸುಮಾರು 5 ಕೋಟಿಯಷ್ಟು ವೀಕ್ಷಣೆ ಪಡೆದು ಹೊಸ ದಾಖಲೆ ಬರೆದಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಬಿಡುಗಡೆಯಾದ 24 ಗಂಟೆಗಳಲ್ಲಿ ಐದು ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದು ಹೊಸ ದಾಖಲೆ ನಿರ್ಮಿಸಿದೆ. ಈ ಸಾಧನೆ ಯಶ್ ಅವರ ಜನಪ್ರಿಯತೆ ಹಾಗೂ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಸ್ಪಷ್ಟಪಡಿಸಿದೆ.

ಫೆಬ್ರವರಿ 20ರಂದು ಟೀಸರ್ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಒಂದೇ ಸಮಯದಲ್ಲಿ ಬಿಡುಗಡೆಯಾಯಿತು. ಕನ್ನಡ ಆವೃತ್ತಿ 74,19,923 ವೀಕ್ಷಣೆಗಳನ್ನು ಪಡೆದು ಹೊಸ ದಾಖಲೆಗೆ ಸಾಕ್ಷಿಯಾಯಿತು. ತಮಿಳು ಆವೃತ್ತಿ 54.31 ಲಕ್ಷ, ಮಲಯಾಳಂ 27.63 ಲಕ್ಷ, ತೆಲುಗು 1.10 ಕೋಟಿ ಹಾಗೂ ಹಿಂದಿ ಆವೃತ್ತಿ 2.19 ಕೋಟಿಗೂ ಅಧಿಕ ವೀಕ್ಷಣೆಗಳನ್ನು ಗಳಿಸಿದೆ. ಎಲ್ಲ ಭಾಷೆಗಳ ವೀಕ್ಷಣೆಗಳನ್ನು ಒಟ್ಟುಗೂಡಿಸಿದಾಗ 24 ಗಂಟೆಗಳಲ್ಲಿ ಐದು ಕೋಟಿಗೂ ಹೆಚ್ಚು ವೀಕ್ಷಣೆಗಳ ಭರ್ಜರಿ ಮೈಲಿಗಲ್ಲು ತಲುಪಿದೆ.

ಈ ಸಿನಿಮಾದಲ್ಲಿ ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಖ್ಯಾತ ನಟಿಯರಾದ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರವನ್ನು ಪ್ರತಿಭಾವಂತ ನಿರ್ದೇಶಕಿ ಗೀತು ಮೋಹನ್ದಾಸ್ ನಿರ್ದೇಶಿಸಿದ್ದಾರೆ.

ಒಂದು ನಿಮಿಷ 55 ಸೆಕೆಂಡ್‌ಗಳ ಈ ಟೀಸರ್ ಅನ್ನು ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಅದ್ಭುತ ದೃಶ್ಯ ವೈಭವ, ಸ್ಟೈಲಿಶ್ ಪ್ರಸ್ತುತಿ ಹಾಗೂ ಭರ್ಜರಿ ಹಿನ್ನೆಲೆ ಸಂಗೀತದಿಂದ ಟೀಸರ್ ಪ್ರೇಕ್ಷಕರ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ‘ಟಾಕ್ಸಿಕ್’ ಸಿನಿಮಾ ಇದೀಗ ದೇಶಾದ್ಯಂತ ಸಿನಿಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!